ಅಪಘಾತ: ಸ್ಕೂಟರ್ ಸವಾರ ಮೃತ್ಯು
Update: 2020-03-08 23:02 IST
ಬ್ರಹ್ಮಾವರ, ಮಾ.8: ವಾಹನವೊಂದು ಸ್ಕೂಟರ್‌ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರ ಮೃತಪಟ್ಟ ಘಟನೆ ಬ್ರಹ್ಮಾವರ ಮಹೇಶ್ ಆಸ್ಪತ್ರೆ ಬಳಿ ಮಾ.7ರಂದು ಮಧ್ಯಾಹ್ನ ವೇಳೆ ನಡೆದಿದೆ.
ಮೃತರನ್ನು ಕುಶಲ್ ಶೆಟ್ಟಿ (67) ಎಂದು ಗುರುತಿಸಲಾಗಿದೆ. ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ವಾಹನವೊಂದು ಸ್ಕೂಟರನ್ನು ಓವರ್‌ಟೇಕ್ ಮಾಡುವ ಭರದಲ್ಲಿ ಸ್ಕೂಟರ್‌ನ ಹಿಂಬದಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಸ್ಕೂಟರ್ ಸಮೇತ ಸವಾರ ರಸ್ತೆಗೆ ಬಿದ್ದರು . ಗಂಭೀರವಾಗಿ ಗಾಯಗೊಂಡ ಕುಶಲ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೇ ಸಂಜೆ ವೇಳೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.