ಸಿಎಎ ಪ್ರತಿಭಟನೆ ಸಂದರ್ಭ ಸುಳ್ಳು ಸುದ್ದಿ ಪ್ರಸಾರ ಆರೋಪ: ಪಿಎಫ್‌ಐ ಸದಸ್ಯನ ಬಂಧನ

Update: 2020-03-09 12:56 GMT

ಹೊಸದಿಲ್ಲಿ, ಮಾ.9: ಪೌರತ್ವ ಕಾಯ್ದೆಯನ್ನು ವಿರೋಧಿಸಿ ದಿಲ್ಲಿಯಲ್ಲಿ ನಡೆದಿದ್ದ ಪ್ರತಿಭಟನೆ ಸಂದರ್ಭ ಸುಳ್ಳು ಸುದ್ದಿ ಪ್ರಸಾರ ಮಾಡಿದ್ದ ಆರೋಪದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ(ಪಿಎಫ್‌ಐ)ದ ಸದಸ್ಯನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪೌರತ್ವ ಕಾಯ್ದೆ ವಿರೋಧಿ ಪ್ರತಿಭಟನೆ ಸಂದರ್ಭ ಸುಳ್ಳು ಸುದ್ದಿ ಪ್ರಸಾರ ಮಾಡಿ ಹಿಂಸೆಯನ್ನು ಪ್ರಚೋದಿಸಿದ ಆರೋಪದಡಿ ಪೂರ್ವದಿಲ್ಲಿಯ ತ್ರಿಲೋಕ್‌ಪುರಿ ನಿವಾಸಿ ಮುಹಮ್ಮದ್ ದಾನಿಷ್ ಖಾನ್ ಎಂಬಾತನನ್ನು ದಿಲ್ಲಿ ಪೊಲೀಸರ ವಿಶೇಷ ತಂಡ ಬಂಧಿಸಿದೆ. ಈತ ಪೌರತ್ವ ವಿರೋಧಿ ಪ್ರತಿಭಟನೆಯನ್ನು ವ್ಯವಸ್ಥೆಗೊಳಿಸಿದ್ದವರಲ್ಲಿ ಒಬ್ಬನಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಈತನ ವಿರುದ್ಧ ಕ್ರಿಮಿನಲ್ ಒಳಸಂಚು ಮತ್ತು ದಂಗೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈತನ ವಿಚಾರಣೆಯಲ್ಲಿ ರಾಷ್ಟ್ರೀಯ ತನಿಖಾ ತಂಡ(ಎನ್‌ಐಎ)ದ ಅಧಿಕಾರಿಗಳೂ ಪಾಲ್ಗೊಂಡಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News