ಸಜೀಪನಡು: ರಸ್ತೆ ಕಾಮಗಾರಿ ಸ್ಥಗಿತ ಖಂಡಿಸಿ ಎಸ್‌ಡಿಪಿಐ ಪ್ರತಿಭಟನೆ

Update: 2020-03-09 12:45 GMT

ಬಂಟ್ವಾಳ, ಮಾ.9: ತಾಲೂಕಿನ ಸಜೀಪನಡು ಗ್ರಾಮದ ಹೊಳೆಬದಿಯಿಂದ ಸಜೀಪ ಜಂಕ್ಷನ್ ವರೆಗೆ ರಸ್ತೆ ಕಾಂಕ್ರೀಟ್ ಕಾಮಗಾರಿ ನಡೆಯುತ್ತಿದ್ದು, ಆದರೆ ಕೆಳದಿನಗಳಿಂದ ಕಾಮಗಾರಿಯು ಸ್ಥಗಿತಗೊಂಡಿದೆ. ಇದನ್ನು ಖಂಡಿಸಿ ಮತ್ತು ಶೀಘ್ರ ರಸ್ತೆ ಕಾಮಗಾರಿಯನ್ನು ಪೂರ್ತಿಗೊಳಿಸಬೇಕೆಂದು ಆಗ್ರಹಿಸಿ ಎಸ್‌ಡಿಪಿಐ ಸಜೀಪನಡು ಗ್ರಾಮ ಸಮಿತಿ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಸಜೀಪನಡು ಜಂಕ್ಷನ್ ಬಳಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಸಜೀಪನಡು ಗ್ರಾ.ಪಂ. ಅಧ್ಯಕ್ಷ ಮೊಹಮ್ಮದ್ ನಾಸಿರ್ ಅವರು, ಒಂದು ವಾರದೊಳಗೆ ಕಾಮಗಾರಿಯನ್ನು ಪುನರಾರಂಭಿಸದಿದ್ದಲ್ಲಿ ಸಂಬಂಧಪಟ್ಟ ಇಲಾಖೆಯ ಮುಂದೆ ಉಗ್ರವಾದ ಹೋರಾಟವನ್ನು ನಡೆಸುತ್ತೇವೆ. ಅಲ್ಲದೇ, ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಕಮಿಷನ್ ಪಡೆದ ಬಗ್ಗೆ ಅಪಪ್ರಚಾರ ನಡೆಸುವ ಕೆಲವು ಸ್ವಹಿತಾಸಕ್ತಿಗಳು ತಮ್ಮ ಆರೋಪವನ್ನು ಸಾಬೀತುಪಡಿಸಬೇಕು ಎಂದು ಒತ್ತಾಯಿಸಿದರು. 

ಈ ಸಂದರ್ಭ ಎಸ್ಡಿಪಿಐ ಸಜೀಪನಡು ಗ್ರಾಮ ಸಮಿತಿ ಅಧ್ಯಕ್ಷ ನವಾಝ್, ಕಾರ್ಯದರ್ಶಿ ನೌರೀಶ್, ಸದಕತುಲ್ಲಾ, ಪಂಚಾಯತ್ ಸದಸ್ಯರಾದ ಎಸ್.ಎನ್ ಇಕ್ಬಾಲ್, ಇಕ್ಬಾಲ್ ಬೈಲುಗುತ್ತು, ರಶೀದ್ ಉಪಸ್ಥಿತರಿದ್ದರು.

ಪ್ರತಿಭಟನೆಯ ಬಳಿಕ ಮನವಿ ಪತ್ರವನ್ನು ಪಂಚಾಯತ್ PDO ಅವರಿಗೆ ಸಲ್ಲಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News