ಉದ್ಯಾವರ ಕೈಗಾರಿಕಾ ವಲಯ ಸ್ಥಾಪನೆಗೆ ಜೆಡಿಎಸ್ ವಿರೋಧ
Update: 2020-03-09 19:41 IST
ಉಡುಪಿ, ಮಾ.9: ಉದ್ಯಾವರದಲ್ಲಿ ಕೈಗಾರಿಕಾ ವಲಯ ಸ್ಥಾಪಿಸಲು ಉಡುಪಿ ಜಿಲ್ಲಾ ಪಂಚಾಯತ್ ಅನುಮತಿ ನೀಡಿರುವ ಕ್ರಮವನ್ನು ಉಡುಪಿ ಜಿಲ್ಲಾ ಜೆಡಿಎಸ್ ವಿರೋಧಿಸಿದೆ.
ಸ್ಥಳೀಯರು ಹಲವಾರು ವರ್ಷಗಳಿಂದ ಈ ಪ್ರದೇಶದಲ್ಲಿ ವಾಸಿಸುತ್ತಿದ್ದು ಸ್ಥಳೀಯರಿಗೆ ತೊಂದರೆಯಾಗುವಂತಹ ಜನವಿರೋಧಿ ನೀತಿಗಳಿಗೆ ನಮ್ಮ ವಿರೋಧವಿದೆ. ಮುಂದಿನ ದಿನಗಳಲ್ಲಿ ಜೆಡಿಎಸ್ ಪಕ್ಷವು ಸ್ಥಳೀಯರ ಪರವಾಗಿ ಹೋರಾಡಲಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ್.ವಿ.ಶೆಟ್ಟಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.