ಸಾಲಿಹಾತ್ ಪದವಿ ಕಾಲೇಜಿನಲ್ಲಿ ಮಹಿಳಾ ದಿನಾಚರಣೆ
ಉಡುಪಿ, ಮಾ.9: ತೋನ್ಸೆ ಹೂಡೆಯ ಸಾಲಿಹಾತ್ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಹೂಡೆ ಜಮಾತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ಜಂಟಿ ಸಹಯೋಗದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನವನ್ನು ಕಾಲೇಜಿನಲ್ಲಿ ಇತ್ತೀಚೆಗೆ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಉಡುಪಿ ಜಿಲ್ಲಾ ಮಹಿಳಾ ಒಕ್ಕೂಟ ಸುಗಮ್ಯ ಇದರ ನಿಕಟಪೂರ್ವ ಅಧ್ಯಕ್ಷೆ ಜನೆಟ್ ಬರ್ಬೋಝ ಮಾತನಾಡಿ, ಮಹಿಳೆಯು ಪ್ರತಿಯೊಂದು ಕ್ಷೇತ್ರದಲ್ಲಿಯೂ ತನ್ನ ಸಾಮರ್ಥ್ಯವನ್ನು ತೋರಿಸಿ ಸಾಧನೆಯಲ್ಲಿ ಮೇಲುಗೈ ಸಾಧಿಸುತ್ತಿದ್ದಾಳೆ ಮತ್ತು ಮಹಿಳೆ ಪ್ರಾಮಾಣಿಕವಾಗಿ ತನ್ನ ಕರ್ತವ್ಯ ನಿರ್ವಹಿಸುವವಳಾಗಿದ್ದಾಳೆ ಹಾಗೂ ಕ್ಷಮೆಯ ಧರಿತ್ರಿಯಾಗಿದ್ದಾಳೆ ಎಂದು ಹೇಳಿದರು.
ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಶಬೀನಾ ಹಾವೇರಿಪೇಟ್ ವಹಿಸಿದ್ದರು. ಅರೇಬಿಕ್ ಕಾಲೇಜಿನ ಪ್ರಾಂಶುಪಾಲೆ ಕುಲ್ಸುಮ್ ಅಬೂಬಕರ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪದವಿ ಪೂರ್ವ ಕಾಲೇಜು ವಿಭಾಗದ ಉಪಪ್ರಾಂಶುಪಾಲೆ ಶಬಾನಾ ಮುಮ್ತಾಜ್, ಶಾಲಾ ಮುಖ್ಯೋ ಪಾಧ್ಯಾಯಿನಿ ಲವೀನ ಕ್ಲಾರ, ಸಮೀನ ನಝೀರ್, ಶಾಲಾ ವಿದ್ಯಾರ್ಥಿ ಪ್ರತಿನಿಧಿ ಶಗುಫ್ತ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ಝಿಯ ಮೆಹ್ವಿಶ್ ಪ್ರಾರ್ಥಿಸಿದರು. ಜಮೀಲ ಸದೀದ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕಿ ತಸ್ನೀಂ ವಂದಿಸಿದರು.