ಹೋಳಿ ಮೆರವಣಿಗೆ: ಮದ್ಯ ಮಾರಾಟ ನಿಷೇಧ
Update: 2020-03-09 20:11 IST
ಉಡುಪಿ, ಮಾ.9: ಕುಂದಾಪುರ ತಾಲೂಕು ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ ಗ್ರಾಮದಲ್ಲಿ ಕೊಂಕಣ ಖಾರ್ವಿ ಸಮಾಜದವರು ಮಾ. 8ರಿಂದ 10ರವರೆಗೆ ಹೋಳಿ ಹಬ್ಬವನ್ನು ಆಚರಿಸಲಿದ್ದು, ಮಾ.10ರಂದು ಹೋಳಿ ಮೆರವಣಿಗೆ ನಡೆಯಲಿದೆ.
ಈ ಸಂದರ್ಭ ಸಾರ್ವಜನಿಕ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಗಂಗೊಳ್ಳಿ ಪೊಲೀಸ್ ಠಾಣಾ ಸರಹದ್ದಿನ ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಮಾ.10ರ ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟದ ಸನ್ನದು ಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು, ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಗಂಗೊಳ್ಳಿ, ಗುಜ್ಜಾಡಿ, ಹೊಸಾಡು, ತ್ರಾಸಿ ಗ್ರಾಮಗಳ ವ್ಯಾಪ್ತಿಯಲ್ಲಿ ಮಾ.10 ನ್ನು ಒಣದಿನ ಎಂದು ಘೋಷಿಸಿ, ಮದ್ಯಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ. ಜಗದೀಶ್ ಆದೇಶ ಹೊರಡಿ ಸಿದ್ದಾರೆ.