ಪೊಕ್ಸೋ ಪ್ರಕರಣ: ಆರೋಪಿ ದೋಷಮುಕ್ತ
ಉಡುಪಿ, ಮಾ. 9: ಮೂರು ವರ್ಷಗಳ ಹಿಂದೆ ಅಪ್ರಾಪ್ತೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿಯನ್ನು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ದೋಷಮುಕ್ತಗೊಳಿಸಿ ಇಂದು ಆದೇಶ ನೀಡಿದೆ.
2018ರ ಎಪ್ರಿಲ್ ತಿಂಗಳಲ್ಲಿ ಕಾಜಿ ಹುಸೇನ್ (21) ಎಂಬಾತನು ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಗೋವಾಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಅತ್ಯಾಚಾರ ಎಸಗಿ ದ್ದನು ಎಂದು ದೂರಲಾಗಿತ್ತು. ಈ ಬಗ್ಗೆ ಆರೋಪಿ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಿಸಲಾಗಿತ್ತು.
ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಚಾರಣೆಯನ್ನು ಕೈಗೆತ್ತಿಕೊಂಡು, ಸಾಕ್ಷಿಗಳ ಹೇಳಿಕೆಯನ್ನು ಪಡೆದು ಕೊಂಡಿತ್ತು. ಈ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ಆರೋಪಿಯ ಮೇಲಿನ ಆರೋಪವನ್ನು ಸಾಬೀತು ಪಡಿಸುವಲ್ಲಿ ವಿಫಲವಾಗಿವೆ ಎಂದು ಅಭಿಪ್ರಾಯ ಪಟ್ಟ ನ್ಯಾಯಾಧೀಶ ಸಿ.ಎಂ. ಜೋಶಿ ಆರೋಪಿಯನ್ನು ದೋಷಮುಕ್ತಗೊಳಿಸಿ ಆದೇಶ ನೀಡಿದರು. ಆರೋಪಿಯ ಪರವಾಗಿ ಯುವ ನ್ಯಾಯವಾದಿ ಆಸೀಫ್ ಬೈಕಾಡಿ ಮತ್ತು ನ್ಯಾುವಾದಿ ಅಬೂಬಕ್ಕರ್ ಸಿದ್ಧಿಕ್ ವಾದಿಸಿದರು.