ಎನ್‌ಪಿಆರ್ ಗೆ ವಿರೋಧ, ಸಿಎಎ ವಿರುದ್ಧದ ಹೋರಾಟಕ್ಕೆ ಬೆಂಬಲ: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ

Update: 2020-03-10 14:49 GMT

ಬೆಂಗಳೂರು, ಮಾ.10: ರಾಜ್ಯ ಮತ್ತು ದೇಶದ ಪ್ರಸ್ತುತ ರಾಜಕೀಯ ವಿದ್ಯಾಮಾನಗಳ ಬಗ್ಗೆ ಚರ್ಚೆ ಹಾಗೂ ದೇಶದಲ್ಲಿ ಕಳೆದ ಹಲವು ದಿನಗಳಿಂದ ನಡೆಯುತ್ತಿರುವ ಎನ್‌ಪಿಆರ್, ಎನ್‌ಆರ್‌ಸಿ ಹಾಗೂ ಸಿಎಎ ವಿರುದ್ಧದ ಅಹಿಂಸಾತ್ಮಕ ಚಳವಳಿಯನ್ನು ಬೆಂಬಲಿಸಬೇಕೆಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯಿಸಲಾಯಿತು.

ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮತ್ತು ಕಾರ್ಯಾಧ್ಯಕ್ಷ ಈಶ್ವರ್ ಬಿ. ಖಂಡ್ರೆ ಹಾಜರಿದ್ದರು.

ನಿರ್ಣಯಗಳು: ಭಾರತ ದೇಶದ ಸಂವಿಧಾನದ ಮೂಲ ಆಶಯಗಳನ್ನು ಗೌರವಿಸಿ, ರಕ್ಷಿಸುವ ದೃಷ್ಟಿಯಿಂದ ಮತ್ತು ದೇಶದ ಸಾಮಾನ್ಯ ಜನರ ನೆಮ್ಮದಿಗೆ ಯಾವುದೇ ಆತಂಕ ಅಥವಾ ಭಯವಿಲ್ಲದ ವಾತಾವರಣ ಸೃಷ್ಟಿಸಬೇಕಾದುದು ನಮ್ಮೆಲ್ಲರ ಕರ್ತವ್ಯ. ದೇಶದ ಹಿತದೃಷ್ಟಿ ಮತ್ತು ಸಂವಿಧಾನದ ಆಶಯಗಳನ್ನು ರಕ್ಷಿಸುವ ದೃಷ್ಟಿಯಿಂದ ಎನ್‌ಪಿಆರ್ ಅನ್ನು ಜಾರಿಗೊಳಿಸದಿರಲು ಸರ್ವಾನುಮತದಿಂದ ಸರಕಾರವನ್ನು ಒತ್ತಾಯಿಸಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News