ಡಾ. ದೊರೆಸ್ವಾಮಿಗೆ ರಾಷ್ಟ್ರೀಯ ಪ್ರಶಸ್ತಿ
Update: 2020-03-10 21:08 IST
ಉಳ್ಳಾಲ: ಮಂಗಳೂರು ವಿವಿ ಕಾಲೇಜಿನಲ್ಲಿ ಗಣಕಯಂತ್ರ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಪ್ರೊಫೆಸರ್ ಆಗಿ ಸೇವೆ ಸಲ್ಲಿಸುತ್ತಿರುವ ಡಾ. ದೊರೆಸ್ವಾಮಿ ಅವರಿಗೆ ಬೆಂಗಳೂರಿನ ಇಂಟರ್ ನ್ಯಾಶನಲ್ ಇಸ್ಟಿಟ್ಯೂಟ್ ಫಾರ್ ಸೋಶಿಯಲ್ ಆ್ಯಂಡ್ ಎಕನಾಮಿಕ್ಸ್ ರೆಫರ್ಸ್ ಸಂಸ್ಥೆಯು ಡಾ. ಎಪಿಜೆ ಅಬ್ದುಲ್ ಕಲಾಂ ಲೈಫ್ ಕ್ರೈಂ ಅರ್ಚಿವ್‍ಮೆಂಟ್ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.
ಅವರು ವಿವಿ ಕಾಲೇಜಿನಲ್ಲಿ ಮಾಡಿದ ಬೋಧನೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗಿದೆ.
ಮೈಸೂರು ವಿವಿ ಕಾಲೇಜಿನಲ್ಲಿ ಎಂಎಸ್ಸಿ ಶಿಕ್ಷಣ ಪಡೆದ ಅವರು 2003ರಲ್ಲಿ ಮಂಗಳೂರು ವಿವಿ ಕಾಲೇಜಿನ ಗಣಕಯಂತ್ರ ವಿಭಾಗದ ಪ್ರೊಫೆಸರ್ ಆಗಿ ನೇಮಕಗೊಂಡಿದ್ದಾರೆ.