ಕಸಾಪ ಪರೀಕ್ಷೆಗಳ ಫಲಿತಾಂಶ ಪ್ರಕಟ

Update: 2020-03-10 16:42 GMT

ಬೆಂಗಳೂರು, ಮಾ.10: ಕನ್ನಡ ಸಾಹಿತ್ಯ ಪರಿಷತ್ತು 2019-20ನೇ ಸಾಲಿನಲ್ಲಿ ನಡೆಸಿದ ಕನ್ನಡ ಪ್ರವೇಶ, ಕಾವ, ಜಾಣ ಮತ್ತು ರತ್ನ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲಾಗಿದೆ. ರಾಜ್ಯದ ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಫಲಿತಾಂಶದ ಪಟ್ಟಿಯನ್ನು ಕಳುಹಿಸಿ ಕೊಡಲಾಗಿದೆ. ಅಲ್ಲದೇ ಕಸಾಪದ ಪ್ರಕಟನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಅಂಕಪಟ್ಟಿ ಹಾಗೂ ಪ್ರಮಾಣ ಪತ್ರಗಳನ್ನು ಶೀಘ್ರದಲ್ಲಿಯೇ ಎಲ್ಲ ಅಭ್ಯರ್ಥಿಗಳಿಗೆ ಕಳುಹಿಸಿಕೊಡಲಾಗುವುದು. ಮರುಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅಂಕಪಟ್ಟಿಗಳು ಕಳುಹಿಸಿದ ದಿನಾಂಕದಿಂದ ಒಂದು ತಿಂಗಳೊಳಗಾಗಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ದೂ.ಸಂ: 26623584ಗೆ ಹಾಗೂ ಕಸಾಪದ ವೆಬ್‌ಸೈಟ್ www.kasapa.in ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News