ಕೆಎಸ್‌ಆರ್‌ಟಿಸಿಯಿಂದ ಮಹಿಳಾ ದಿನಾಚರಣೆ: ಪದ್ಮಶ್ರೀ ಪುರಸ್ಕೃತ ತುಳಸಿ ಗೌಡಗೆ ಉಚಿತ ಬಸ್ ಪಾಸ್

Update: 2020-03-10 17:37 GMT

ಬೆಂಗಳೂರು, ಮಾ.10: ಅಂತರ್‌ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕೆಎಸ್‌ಆರ್‌ಟಿಸಿ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಲಕ್ಷಣ್ ಸವದಿ ಅವರು ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಸಾರಿಗೆ ಇಲಾಖೆ 17 ವಿಭಾಗದಿಂದ ತಲಾ ಒಬ್ಬ ಮಹಿಳಾ ನಿರ್ವಾಹಕಿ, ತಾಂತ್ರಿಕ ಸಿಬ್ಬಂದಿ ಮತ್ತು ಭದ್ರತಾ ರಕ್ಷಕಿ ಸೇರಿ ಒಟ್ಪು47 ಸಿಬ್ಬಂದಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ಸಂದರ್ಭದಲ್ಲಿ ಪದ್ಮಶ್ರೀ ಪುರಸ್ಕೃತ ತುಳಸಿ ಗೌಡ ಅವರಿಗೆ ಜೀವಿತಾವಧಿ ನಿಗಮದ ಎಲ್ಲಾ ಬಸ್ಸುಗಳಲ್ಲಿಯೂ ಉಚಿತವಾಗಿ ಪ್ರಯಾಣಿಸಲು ಬಸ್ ಪಾಸ್ ನೀಡಲಾಯಿತು ಮತ್ತು 25 ಸಾವಿರ ಗೌರವಧನ ನೀಡಿ ಸನ್ಮಾನಿಸಲಾಯಿತು.

ಕೆಎಸ್‌ಆರ್‌ಟಿಸಿಯ ಅನುಪಯುಕ್ತ ಬಸ್ಸಿನಲ್ಲಿ ಶೌಚಾಲಯವನ್ನು ನಿರ್ಮಿಸಲಾಗುತ್ತಿದ್ದು, ಅದರ ಲಾಂಛನ ಸ್ತ್ರೀ ಶೌಚಾಲಯ ಅನಾವರಣ ಹಾಗೂ ನಿಗಮದ ನಿಯತಕಾಲಿಕ ಸಾರಿಗೆ ಸಂಪದ ಬಿಡುಗಡೆ ಮಾಡಲಾಯಿತು

ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ, ಸಿಬ್ಬಂದಿ ನಿರ್ದೇಶಕಿ ಕವಿತಾ ಎಸ್. ಮನ್ನೀಕೇರಿ, ಭದ್ರತಾ ನಿರ್ದೇಶಕ ಡಾ. ರಾಮ್ ಸಪೆಟ್, ಹೇಮಂತ್ ಮಾದೇಗೌಡ, ಹಾಗೂ ಇನ್ನಿತರ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News