×
Ad

ಯುವಕ ನಾಪತ್ತೆ

Update: 2020-03-11 21:28 IST

ಉಡುಪಿ, ಮಾ.11: ಬ್ರಹ್ಮಾವರ ತಾಲೂಕು ಹವರಾಲು ಕಾವಡಿ ಗ್ರಾಮದ ನಿವಾಸಿ ಪಾರ್ವತಿ ಮರಕಾಲ ಎಂಬವರ ಹಿರಿಯ ಮಗ ಸುಕುಮಾರ (22) ಸುಮಾರು ಮೂರು ತಿಂಗಳ ಹಿಂದೆ ಮನೆಗೆ ಬಂದು ಕೆಲಸಕ್ಕೆ ಹೋಗುವುದಾಗಿ ಹೇಳಿ ಹೋದವರು ಇಲ್ಲಿಯವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾ ಗಿರುವುದಾಗಿ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಚಹರೆ: 5 ಅಡಿ 8 ಇಂಚು ಎತ್ತರ, ಎಣ್ಣೆ ಕಪ್ಪು ಮೈಬಣ್ಣ ಹೊಂದಿದ್ದು, ಕನ್ನಡ ಭಾಷೆ ಬಲ್ಲವರಾಗಿದ್ದಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, ಮೊ:9480805454, ಪೊಲೀಸ್ ವೃತ್ತನಿರೀಕ್ಷಕರ ಕಚೇರಿ, ಉಡುಪಿ ದೂ.ಸಂಖ್ಯೆ: 0820-2561966, ಮೊಬೈಲ್: 9480805432ನ್ನು ಸಂಪರ್ಕಿಸುವಂತೆ ಕೋಟ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News