ಪುಸ್ತಕ ಸೊಗಸು ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2020-03-11 17:14 GMT

ಬೆಂಗಳೂರು, ಮಾ.11: ಕನ್ನಡ ಪುಸ್ತಕ ಪ್ರಾಧಿಕಾರವು ಜನವರಿ 2019ರಿಂದ ಡಿಸೆಂಬರ್ 2019ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟ ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಪ್ರಕಾಶಕರು, ಮುದ್ರಕರು, ಕಲಾವಿದರು, ಲೇಖಕರು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದ ಕೃತಿಗಳ ಪ್ರಕಾಶಕರು, ಮುದ್ರಕರು, ಕಲಾವಿದರಿಗೆ ಕನ್ನಡ ಪುಸ್ತಕ ಸೊಗಸು-2019 ಬಹುಮಾನವನ್ನು ನೀಡಲಾಗುವುದು. ಅರ್ಜಿ ಸಲ್ಲಿಸುವವರು ಪುಸ್ತಕದ ಹೆಸರು, ಪ್ರಕಟವಾದ ವರ್ಷ, ಪ್ರಕಾಶನದ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು, ಚಿತ್ರ, ಪೂರ್ಣ ವಿಳಾಸದೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ಏ.4ರ ಒಳಗೆ ಅಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ ಜೆ.ಸಿ ರಸ್ತೆ ಇಲ್ಲಿಗೆ ಕಳುಹಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕನ್ನಡ ಪುಸ್ತಕ ಪ್ರಾಧಿಕಾರದ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. ದೂ.ಸಂಖ್ಯೆ 080-22484516, 22107704ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News