ಕೆಪಿಸಿಸಿ ಅಧ್ಯಕ್ಷರಾಗಿ ಡಿಕೆಶಿ ನೇಮಕ: ಹನೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಂದ ಸಂಭ್ರಮಾಚರಣೆ

Update: 2020-03-11 17:26 GMT

ಹನೂರು, ಮಾ.11: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ನೇಮಕವಾಗುತ್ತಿದ್ದಂತೆ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಹನೂರು ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಸಿಹಿ ಹಂಚಿ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಸದಸ್ಯರಾದ ಗಿರೀಶ್, ಹರೀಶ್, ಸಂಪತ್, ಕಾಂಗ್ರೆಸ್ ಮುಖಂಡರಾದ ಚಿಕ್ಕತಮಯ್ಯಗೌಡ, ಜಯಪ್ರಕಾಶ್ ಗುಪ್ತ, ಪಪಂ ಮಾಜಿ ಉಪಾಧ್ಯಕ್ಷ ಬಸವರಾಜು, ಮುಖಂಡರಾದ ನಟರಾಜು, ಸಿದ್ದರಾಜು ಮಹೇಶ್, ಸೋಮಶೇಖರ್, ಫಿಯಪ್ಪಾ, ಹನೂರು ಟೌನ್ ಯುವ  ಕಾಂಗ್ರೆಸ್ ಅಧ್ಯಕ್ಷ ಸತೀಶ್, ಒಕ್ಕಲಿಗ ಯುವ ಸಮಿತಿಯ ನಿರ್ದೇಶಕ ಸಂತೋಷ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News