×
Ad

ಪರೀಕ್ಷೆ ಬರೆಯದೇ ಪಾಸ್ ಆಗಲಿದ್ದಾರೆ ಈ ಜಿಲ್ಲೆಗಳ 1-5 ತರಗತಿಯ ಸಿಬಿಎಸ್‌ಸಿ ವಿದ್ಯಾರ್ಥಿಗಳು !

Update: 2020-03-12 17:52 IST
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.12: ಕೊರೋನ ವೈರಸ್ ಭೀತಿಯಿಂದ ಈಗಾಗಲೇ ಬೆಂಗಳೂರು ನಗರ, ಗ್ರಾಮಾಂತರದ ಪ್ರೀ ನರ್ಸರಿಯಿಂದ ಪ್ರಾಥಮಿಕ ತರಗತಿಯ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಸಿಬಿಎಸ್‌ಸಿ ಶಾಲೆಗಳಲ್ಲಿ 1ರಿಂದ 5ನೇ ತರಗತಿಯ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಯನ್ನು ನಡೆಸದೇ, ಎಲ್ಲರನ್ನೂ ಪಾಸ್ ಮಾಡಲು ಸಿಬಿಎಸ್‌ಸಿ ಒಕ್ಕೂಟ ನಿರ್ಧಾರ ಕೈಗೊಂಡಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಸಿಬಿಎಸ್‌ಸಿ ಶಾಲೆಗಳ ಒಕ್ಕೂಟ, 1ರಿಂದ 5ನೇ ತರಗತಿಗೆ ವಾರ್ಷಿಕ ಪರೀಕ್ಷೆ ನಡೆಸುತ್ತಿಲ್ಲ. ಹಿಂದಿನ ಟೆಸ್ಟ್‌ಗಳ ಅಂಕದ ಆಧಾರದಲ್ಲಿ ಪಾಸ್ ಮಾಡಲಾಗುವುದು. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಾಮರಾಜನಗರ, ಕೊಡಗು ವ್ಯಾಪ್ತಿಯ ಸಿಬಿಎಸ್‌ಸಿ ಶಾಲೆಗಳ 1ರಿಂದ 5ನೇ ತರಗತಿ ವಿದ್ಯಾರ್ಥಿಗಳನ್ನು ವಾರ್ಷಿಕ ಪರೀಕ್ಷೆ ನಡೆಸದೇ ಪಾಸ್ ಮಾಡಲಾಗುವುದು ಎಂದು ತಿಳಿಸಿದೆ.

ಈ ಕುರಿತಂತೆ ಪ್ರತಿಕ್ರಿಯಿಸಿರುವ ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, 1ರಿಂದ 5ನೇ ತರಗತಿ ವಿದ್ಯಾರ್ಥಿಗಳು ಪಾಸ್ ಮಾಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ಪಾಸ್ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ. ಈ ನಿರ್ಧಾರವನ್ನು ಕೈಗೊಂಡಿರುವುದಾಗಿ ಸಿಬಿಎಸ್‌ಸಿ ಶಾಲೆಗಳ ಒಕ್ಕೂಟ ತಿಳಿಸಿದೆ. ಹೀಗಾಗಿ ಈ ಬಾರಿ 1 ರಿಂದ 5ನೇ ತರಗತಿಯ ವಿದ್ಯಾರ್ಥಿಗಳನ್ನು ಪಾಸ್ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News