'ಎಸೆಸೆಲ್ಸಿ ಪರೀಕ್ಷೆ ಮುಂದೂಡಿಕೆ' ಸುದ್ದಿ ಬಗ್ಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟನೆ

Update: 2020-03-12 14:31 GMT
ಸಾಂದರ್ಭಿಕ ಚಿತ್ರ

ಬೆಂಗಳೂರು, ಮಾ.12: ಮಾರ್ಚ್-ಎಪ್ರಿಲ್‌ನಲ್ಲಿ ನಡೆಯಲಿರುವ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಿಗದಿತ ವೇಳಾಪಟ್ಟಿಯಂತೆ ನಡೆಯಲಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿಗಳು ಆಧಾರ ರಹಿತವಾಗಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಟಪಡಿಸಿದೆ.

ರಾಜ್ಯದೆಲ್ಲೆಡೆ ಮಹಾಮಾರಿ ಕೊರೋನ ಭೀತಿ ಆವರಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಮಾ.27 ರಿಂದ ಎ.9 ರವರೆಗೆ ನಡೆಯಲಿರುವ ಪರೀಕ್ಷೆಗಳು ಮುಂದೂಡಲಾಗಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಇದು ಆಧಾರ ರಹಿತವಾಗಿದೆ. ಹೀಗಾಗಿ, ಪೋಷಕರು ಹಾಗೂ ವಿದ್ಯಾರ್ಥಿಗಳು ಆತಂಕ ಪಡಬೇಕಾದ ಅಗತ್ಯವಿಲ್ಲ ಎಂದು ಮಂಡಳಿಯ ನಿರ್ದೇಶಕರು(ಪರೀಕ್ಷೆಗಳು) ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News