ಎಸೆಸೆಲ್ಸಿ ಪರೀಕ್ಷೆ: ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿ
Update: 2020-03-12 20:26 IST
ಉಡುಪಿ, ಮಾ.12: ಉಡುಪಿ ಜಿಲ್ಲೆಯ ಒಟ್ಟು 51 ಪರೀಕ್ಷಾ ಕೇಂದ್ರಗಳಲ್ಲಿ ಮಾ.27ರಿಂದ ಎ.9ರವರೆಗೆ ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಯನ್ನು ಶಾಂತಿಯುತವಾಗಿ ಹಾಗೂ ದೋಷರಹಿತವಾಗಿ ನಡೆಸಲು, ನಡೆಯಬಹುದಾದ ಎಲ್ಲಾ ರೀತಿಯ ಅವ್ಯವಹಾರ ಗಳನ್ನು ತಡೆಗಟ್ಟಲು ನಿಗದಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ, ಪರೀಕ್ಷೆಗಳು ನಡೆಯುವ ದಿನಗಳಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕೇಂದ್ರಗಳ ಸುತ್ತಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, 144(1)ರಂತೆ ನಿಷೇಧಾಜ್ಞೆ ಜಾರಿಗೊಳಿಸಿರುವ ಜಿಲ್ಲಾಧಿಕಾರಿ ಜಿ.ಜಗದೀಶ್, ಆಸುಪಾಸಿನ ಎಲ್ಲಾ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ಆದೇಶ ಹೊರಡಿಸಿದ್ದಾರೆ.