×
Ad

ದೇಶದ್ರೋಹದ ಪ್ರಕರಣ: ಬೀದರ್ ನ ಶಾಹೀನ್ ಶಾಲಾ ಆಡಳಿತ ಮಂಡಳಿಯಿಂದ ಜಾಮೀನು ಕೋರಿ ಅರ್ಜಿ

Update: 2020-03-12 20:29 IST
ಫೈಲ್ ಚಿತ್ರ

ಬೀದರ್, ಮಾ.12: ಸಿಎಎ ವಿರೋಧಿ ನಾಟಕ ಪ್ರದರ್ಶಿಸಿದ್ದಕ್ಕಾಗಿ ದಾಖಲಾಗಿದ್ದ ದೇಶದ್ರೋಹದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹೀನ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಬೀದರ್ ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ಕೋರ್ಟ್‌ಗೆ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. 

ನಿರೀಕ್ಷಣಾ ಜಾಮೀನು ಕೋರಿ ಶಾಹೀನ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಸಲ್ಲಿಸಿರುವ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಪೀಠವು ಸರಕಾರಕ್ಕೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ. ಪೊಲೀಸರು ಕೋರ್ಟ್‌ಗೆ ಎಫ್‌ಐಆರ್ ಪ್ರತಿ ಮಾತ್ರ ಸಲ್ಲಿಸಿದ್ದಾರೆ. ದೋಷಾರೋಪಣಾ ಪಟ್ಟಿ ಸಲ್ಲಿಸಿಲ್ಲ. ಜೆಎಂಎಫ್‌ಸಿ ಕೋರ್ಟ್ ಪ್ರಕ್ರಿಯೆ ಪೂರ್ಣಗೊಂಡ ನಂತರ ದೇಶದ್ರೋಹ ಪ್ರಕರಣದ ವಿಚಾರಣೆ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ಕೋರ್ಟ್‌ನಲ್ಲಿ ಆರಂಭವಾಗುವ ಸಾಧ್ಯತೆ ಇದೆ.

ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಮಾ.3ರಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್ ಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News