×
Ad

ಬೆಂಗಳೂರು: ಮದುವೆ ಕಾರ್ಯಕ್ರಮಕ್ಕೂ ತಟ್ಟಿದ ಕೊರೋನ ಭೀತಿ

Update: 2020-03-12 21:36 IST

ಬೆಂಗಳೂರು, ಮಾ.12: ನಗರದಲ್ಲಿ ಕೊರೋನ ಭೀತಿ ಹೆಚ್ಚಾಗಿರುವದರಿಂದ ಶಿವಾಜಿನಗರ ವ್ಯಾಪ್ತಿಯಲ್ಲಿ ಯಾವುದೇ ಮದುವೆ ಕಾರ್ಯಕ್ರಮಗಳನ್ನು ಆಯೋಜಿಸದಂತೆ ವೈದ್ಯಾಧಿಕಾರಿ ಶಿವೇಗೌಡ ಆದೇಶ ನೀಡಿದ್ದಾರೆ. 

ಬಿಬಿಎಂಪಿ ಆಯುಕ್ತ ಬಿ.ಹೆಚ್. ಅನಿಲ್ ಕುಮಾರ್ ಆದೇಶದ ಮೇರೆಗೆ ಈ ಕ್ರಮ ಕೈಗೊಂಡಿದ್ದು, ಶಿವಾಜಿನಗರದ ಎಲ್ಲ ಹೊಟೇಲ್, ಕಲ್ಯಾಣ ಮಂಟಪಗಳಿಗೆ ಮದುವೆ ಕಾರ್ಯಕ್ರಮ ನಡೆಸದಂತೆ ಕಟ್ಟುನಿಟ್ಟಿನ ಎಚ್ಚರಿಕೆ ರವಾನಿಸಿದ್ದಾರೆ. ಒಂದು ವೇಳೆ ಈ ಆದೇಶ ಮೀರಿ ಮದುವೆ ಕಾರ್ಯಕ್ರಮ ಆಯೋಜಿಸಿದರೆ ಅಂತಹ ಹೊಟೇಲ್ ಹಾಗೂ ಕಲ್ಯಾಣ ಮಂಟಪಗಳ ಟ್ರೇಡ್ ಲೈಸೆನ್ಸ್ ರದ್ದುಗೊಳಿಸುವುದಾಗಿ ವೈದ್ಯಾಧಿಕಾರಿಗಳು ಸೂಚನೆ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News