ಜನರು ಒಂದೆಡೆ ಗುಂಪು ಸೇರುವಂತಿಲ್ಲ: ಬಿಬಿಎಂಪಿ ಆದೇಶ
Update: 2020-03-12 22:16 IST
ಬೆಂಗಳೂರು, ಮಾ.12: ಕೊರೋನ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಕಾರಣ ಯಾವುದೇ ಕಾರಣಕ್ಕೂ ಜನ ಒಂದೆಡೆ ಗುಂಪು ಸೇರುವಂತಿಲ್ಲ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.
ಬಿಬಿಎಂಪಿ ವ್ಯಾಪ್ತಿಯ ಖಾಸಗಿ ಆಸ್ಪತ್ರೆಗಳು, ಬಾರ್ ಆ್ಯಂಡ್ ರೆಸ್ಟೊರೆಂಟ್, ಹೊಟೇಲ್, ಕಲ್ಯಾಣ ಮಂಟಪ, ಚಿತ್ರಮಂದಿರ ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಜನ ಒಟ್ಟಾಗಿ ಗುಂಪು ಸೇರಬಾರದು ಎಂದು ಬಿಬಿಎಂಪಿ ಆಯುಕ್ತ ಅನಿಲ್ ಕುಮಾರ್ ಕಟ್ಟುನಿಟ್ಟಿನ ಸುತ್ತೋಲೆ ಹೊರಡಿಸಿದ್ದಾರೆ.
ಹಾಗೆಯೇ ಪೊಲೀಸರ ಅನುಮತಿ ಇಲ್ಲದೆ, ಎನ್‌ಒಸಿ ಪ್ರತಿ ಪಡೆಯದೆ ಯಾವುದೇ ಸಾರ್ವಜನಿಕ ಸಭೆಯಗಳನ್ನು ಆಯೋಜಿಸುವಂತಿಲ್ಲ ಎಂದು ತಿಳಿಸಿದ್ದಾರೆ
ಜಗತ್ತಿನಾದ್ಯಂತ ತಲ್ಲಣ ಮೂಡಿಸುತ್ತಿರುವ ಕೊರೋನ ವೈರಸ್ ಸೋಂಕು ರಾಜ್ಯದ ಐವರಲ್ಲಿ ಪತ್ತೆಯಾಗಿದೆ. ಸೋಂಕಿತರನ್ನು ಕುಟುಂಬ ಸದಸ್ಯರಿಂದ ಪ್ರತ್ಯೇಕವಾಗಿರಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದ ಜನರು ಮುಂಜಾಗೃತ ಕ್ರಮವಾಗಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ತಿಳಿಸಿದ್ದಾರೆ.