×
Ad

ಪಿ.ಎ. ಫಾರ್ಮಸಿ ಕಾಲೇಜಿನ ವಾರ್ಷಿಕೋತ್ಸವ

Update: 2020-03-13 12:20 IST

ಮಂಗಳೂರು, ಮಾ.13: ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮ ಶಿಕ್ಷಣ ಪಡೆದು ಪದವೀಧರನಾಗುವುದರೊಂದಿಗೆ ಪೋಷಕರಿಗೆ ಗೌರವ ತರುವ ರೀತಿಯಲ್ಲಿ ನಡೆದುಕೊಳ್ಳಬೇಕು. ದೇಶದ ಉತ್ತಮ ಪ್ರಜೆಯಾಗಿ ರೂಪುಗೊಳ್ಳಬೇಕು. ಶಿಕ್ಷಣದ ಜೊತೆಗೆ ಸಮಾಜದ ಹಾಗೂ ತಮ್ಮ ಸುತ್ತಮುತ್ತಲಿನ ಪರಿಸರದ ಬಗ್ಗೆ ಚಿಂತನೆ ನಡೆಸುವಂತವರಾಗಬೇಕು ಎಂದು ಶ್ರೀದೇವಿ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ. ಜಗದೀಶ್ ಕಾಮತ್ ಕಿವಿಮಾತು ಹೇಳಿದ್ದಾರೆ.

ಕೊಣಾಜೆ ನಡುಪದವಿನಲ್ಲಿರುವ ಪಿ.ಎ. ಕಾಲೇಜ್ ಆಫ್ ಫಾರ್ಮಸಿಯಲ್ಲಿ ಇತ್ತೀಚೆಗೆ ನಡೆದ ಎಪಿಸ್ಟಿಮ್- 2020’ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಬೋರ್ಡ್ ಆಫ್ ಸ್ಟಡೀಸ್ ಚೇರ್‌ಮ್ಯಾನ್ ಡಾ.ಮುಹಮ್ಮದ್ ಸಲಾಹುದ್ದೀನ್ ‘ಫಾರ್ಮಾಏಸ್’ ಎನ್ನುವ ವಾರ್ಷಿಕ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.

ಪಿ.ಎ. ಕಾಲೇಜ್ ಆಫ್ ಇಂಜಿನಿಯರಿಂಗ್ ಪ್ರಾಂಶುಪಾಲ ಡಾ.ಅಬ್ದುಲ್ ಶರೀಫ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲ ಡಾ.ರಮೀಝ್ ಎಂ.ಕೆ. ಶುಭ ಹಾರೈಸಿದರು.

ಕ್ರೀಡೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸೆಮಿಸ್ಟರ್ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಗಳಿಸಿರುವ ಹಾಗೂ ರ್ಯಾಂಕ್ ವಿಜೇತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಈ ಸಂದರ್ಭ ಪಿ.ಎ. ಪಾಲಿಟೆಕ್ನಿಕ್ ಪ್ರಾಂಶುಪಾಲ ಪ್ರೊ.ಕೆ.ಪಿ.ಸೂಫಿ, ಪಿ.ಎ. ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಡಾ.ಮೀನಾ ಜೆ. ಪಣಿಕ್ಕರ್, ಪಿ.ಎ. ಮ್ಯಾನೇಜ್‌ಮೆಂಟ್ ಸ್ಟಡೀಸ್‌ನ ನಿರ್ದೇಶಕ ಪ್ರೊ.ಸೈಯದ್ ಅಮೀನ್, ಪಿ.ಎ. ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲೆ ಡಾ.ಆಯಿಶಾ, ಪಿ.ಎ. ಎಜ್ಯುಕೇಶನಲ್ ಟ್ರಸ್ಟ್ ಅಸಿಸ್ಟಂಟ್ ಜನರಲ್ ಮ್ಯಾನೇಜರ್ ಶರ್ಫುದ್ದೀನ್ ಪಿ.ಕೆ. ಉಪಸ್ಥಿತರಿದ್ದರು.

ಪಿ.ಎ. ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಸಲೀಮುಲ್ಲಾ ಖಾನ್ ವಾರ್ಷಿಕ ವರದಿ ವಾಚಿಸಿದರು. ಪ್ರೊ.ನಿಶ್ಮಿತಾ ಮತ್ತು ಪ್ರೊ.ರಿಝ್ವೊನ ಅತಿಥಿಗಳನ್ನು ಪರಿಚಯಿಸಿದರು.

ಅಬ್ದುಲ್ ರಹ್ಮಾನ್ ಕಿರಾಅತ್ ಪಠಿಸಿದರು. ಡಾ. ಮುಹಮ್ಮದ್ ಮುಬೀನ್ ಸ್ವಾಗತಿಸಿದರು. ಪ್ರೊ.ವಿಜೇತ ಕಾರ್ಯಕ್ರಮ ನಿರೂಪಿಸಿದರು. ಪ್ರೊ.ಐಶ್ವರ್ಯಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News