ಕೊರೋನ ವೈರಸ್ ಆತಂಕ: ಸಿಎಂ ಯಡಿಯೂರಪ್ಪ ಪ್ರವಾಸ ರದ್ದು
Update: 2020-03-13 23:54 IST
ಬೆಂಗಳೂರು, ಮಾ. 13: ರಾಜ್ಯದಲ್ಲಿ ಕೊರೋನ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆಯಿಂದ ಎರಡು ದಿನಗಳ ಕಾಲ ಕೈಗೊಂಡಿದ್ದ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ಮಾ.15 ಮತ್ತು 16ರಂದು ಬೆಳಗಾವಿ, ಧಾರವಾಡ ಹಾಗೂ ಗದಗ ಜಿಲ್ಲೆಗಳ ಪ್ರವಾಸ ಕೈಗೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಮುನ್ನಚ್ಚರಿಕೆ ಕ್ರಮವಾಗಿ ಜನ ಸೇರುವ ಎಲ್ಲ ಕಾರ್ಯಕ್ರಮಗಳ ರದ್ದು ಮಾಡಿರುವ ಹಿನ್ನೆಲೆಯಲ್ಲಿ ಸಿಎಂ ತಮ್ಮ ಪ್ರವಾಸ ರದ್ದು ಮಾಡಿದ್ದಾರೆಂದು ಅವರ ಕಚೇರಿ ಪ್ರಕಟಣೆ ತಿಳಿಸಿದೆ.