ಜಯಂತಿಗಳು ಜಾತಿ ಕೇಂದ್ರಿತವಾಗದಂತೆ ಕ್ರಮ: ಸಚಿವ ಸಿ.ಟಿ.ರವಿ

Update: 2020-03-13 18:28 GMT

ಬೆಂಗಳೂರು, ಮಾ.13: ರಾಜ್ಯದಲ್ಲಿ ಮುಂದಿನ ದಿನಗಳಲ್ಲಿ ಜಯಂತಿಗಳನ್ನು ಜಾತಿ ಕೇಂದ್ರಿತವಾಗದಂತೆ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳಲು ಚಿಂತನೆ ನಡೆಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ಶುಕ್ರವಾರ ವಿಧಾನಪರಿಷತ್‌ನಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ಚಿಂತಕರು, ಹಿರಿಯರು, ತಜ್ಞರು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚೆ ಮಾಡುವ ಮೂಲಕ ಈ ಕುರಿತು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ವಿರೋಧ ಪಕ್ಷದ ನಾಯಕ ಎಸ್.ಆರ್.ಪಾಟೀಲ್ ಮಾತನಾಡಿ, ವಿವಿಧ ಸಾಧಕರ ಜಯಂತಿಗಳನ್ನು ಸರಕಾರ ಆಚರಣೆ ಮಾಡುತ್ತಿದೆ. ಆದರೆ, ಅದರಲ್ಲಿ ಎಲ್ಲ ವರ್ಗದ ಜನರೂ ಪಾಲ್ಗೊಳ್ಳುತ್ತಿಲ್ಲ. ಹೀಗಾಗಿ, ಈ ಕುರಿತು ಗಮನ ಹರಿಸಬೇಕು ಎಂದರು. ಈ ವೇಳೆ ಮಧ್ಯಪ್ರವೇಶಿಸಿದ ಜೆಡಿಎಸ್‌ನ ಬಸವರಾಜ ಹೊರಟ್ಟಿ, ಜಯಂತಿಗಳಿಗೆ ನೀಡಿರುವ ಸರಕಾರಿ ರಜೆಗಳನ್ನು ರದ್ಧುಪಡಿಸಿ ಎಂದು ಮನವಿ ಮಾಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News