×
Ad

ಹೂಡೆಯಲ್ಲಿ ವೃದ್ಧ ಸಾವು ಪ್ರಕರಣಕ್ಕೆ ಕೊರೋನಾ ಕಾರಣವಲ್ಲ: ಜಿಲ್ಲಾಧಿಕಾರಿ ಜಿ.ಜಗದೀಶ್

Update: 2020-03-14 14:17 IST
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ, ಮಾ.14:  ಹೂಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದ  ಸುಮಾರು 82 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದು, ಅವರ ಸಾವಿಗೆ  ಕೊರೋನಾ ಕಾರಣವಲ್ಲವೆಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಸ್ಪಷ್ಟಪಡಿಸಿದ್ದಾರೆ.

ಮೃತರು ಮೂಲತಃ ಪಂಜಾಬ್ ನವರಾಗಿದ್ದು, ನವೆಂಬರ್ ನಿಂದ ಹೊಡೆಯಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿದ್ದರು.

ಇವರ ಸಾವಿಗೆ ಕೊರೊನಾ ಕಾರಣವಲ್ಲವಾಗಿದ್ದು, ಈ ಬಗ್ಗೆ ಅನಗತ್ಯವಾಗಿ ಸುದ್ದಿ ಹರಡುವವರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿರುವ ಜಿಲ್ಲಾಧಿಕಕಾರಿ ಜಿ.ಜಗದೀಶ್, ಸಾರ್ವಜನಿಕರು ಯಾವುದೇ ಅನಗತ್ಯ ವದಂತಿಗಳಿಗೆ ಕಿವಿಗೊಡದಂತೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News