ಕೊರೊನಾ ವೈರಸ್ ಭೀತಿ : ವಿಟ್ಲ‌ ಹಿಂದೂ ಸಮಾಜ್ಯೋತ್ಸವ ಮುಂದೂಡಿಕೆ

Update: 2020-03-14 15:04 GMT

ವಿಟ್ಲ, ಮಾ.14: ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ವಿಟ್ಲ ಪ್ರಖಂಡ ಮತ್ತು ವಿರಾಟ್ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಮಾ.15ರಂದು ವಿಟ್ಲ ರಥದ ಗದ್ದೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿರಾಟ್ ಹಿಂದೂ ಸಮಾಜೋತ್ಸವವನ್ನು ಸರಕಾರದ ಆದೇಶದ ಹಿನ್ನೆಲೆಯಲ್ಲಿ ಮುಂದೂಡಲಾಗುತ್ತಿದೆ ಎಂದು ಬಜರಂಗದಳ ಕರ್ನಾಟಕ ದಕ್ಷಿಣ ಪ್ರಾಂತ ಸಹ ಸಂಯೋಜಕ ಮುರಳೀಕೃಷ್ಣ ಹಸಂತಡ್ಕ ತಿಳಿಸಿದ್ದಾರೆ.

ಹಿಂದೂ ಜಾಗೃತಿಯ ಅಭೂತವೂರ್ವವಾದ ಕಾರ್ಯಕ್ರಮವನ್ನು ಹಾಕಿಕೊಂಡು ಕಟ್ಟಕಡೆಯನ್ನು ತಲುಪಿ ಜಾಗೃತಿಗೊಳಿಸಬೇಕು ಎಂಬ ನಿಟ್ಟಿನಲ್ಲಿ ಯೋಜನೆಗಳನ್ನು ಚಟುವಟಿಕೆಗಳನ್ನು ನಡೆಸಲಾಗಿತ್ತು. ಜಗತ್ತಿಗೆ ಆಘಾತಕಾರಿಯಾದ ಕೊರೊನಾ ವೈರಸ್ ಭಾರತಕ್ಕೆ ದಾಳಿ ಇಡುವ ಭೀತಿ ಇದಾಗಿದೆ. ಒಂದು ರೀತಿಯಲ್ಲಿ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಾಬೇಕಾದ ಸಂದರ್ಭಗಳು ಹತ್ತಿರ ಬರುವಂತೆ ಕಾಣಿಸುತ್ತಿದೆ ಎಂದು ವಿಟ್ಲ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ತಿಳಿಸಿದರು.

ರಾಜ್ಯದಲ್ಲಿ ಮುಖ್ಯಮಂತ್ರಿಗಳು ಅಧಿಕೃತ ಆದೇಶದ ಹೊರಡಿಸಿ ಎಲ್ಲಾ ಚಟುವಟಿಕೆಗಳನ್ನು ಸ್ಥಗಿತ ಮಾಡಬೇಕು. ಜನ ಸೇರುವುದರಿಂದ ಕೊರೊನಾ ವೈರಸ್ ಹರಡುವ ಸಾಧ್ಯತೆ ಇರುವ ಹಿನ್ನಲೆಯಲ್ಲಿ ಈ ರೀತಿಯ ಚಟುವಟಿಕೆಯನ್ನು ತಕ್ಷಣದಿಂದ ನಿಲ್ಲಿಸಬೇಕೆಂದು ಹೇಳಿದ್ದಾರೆ. ಇದರ ಆಧಾರದಲ್ಲಿ ಜನರ ಸ್ವಾಥ್ಯದ ನಮ್ಮ ಕರ್ತವ್ಯ ಎಂಬ ನಿಟ್ಟಿನಲ್ಲಿ ಕಾರ್ಚಾಚರಿಸುವ ಅಖಿಲ ಭಾರತ ವಿಶ್ವ ಹಿಂದೂ ಪರಿಷತ್ ಜನ ಸಾಮಾನ್ಯರ ಆರೋಗ್ಯದ ದೃಷ್ಠಿಯಿಂದ ವಿರಾಟ್ ಹಿಂದು ಸಮಾಜೋತ್ಸವವನ್ನು ಮುಂದೂಡುತ್ತಿದ್ದೇವೆ ಎಂದು ತಿಳಿಸಿದರು.

ಸಮಾಜೋತ್ಸವ ಸಮಿತಿ ಅಧ್ಯಕ್ಷ ಹರೀಶ್ ನಾಯಕ್ ವಿಟ್ಲ, ಕಾರ್ಯಾಧ್ಯಕ್ಷ ಕೃಷ್ಣಪ್ಪ ಕಲ್ಲಡ್ಕ, ಪ್ರಧಾನ ಕಾರ್ಯದರ್ಶಿಗಳಾದ ಪದ್ಮನಾಭ ಕಟ್ಟೆ ವಿಟ್ಲ, ಅಕ್ಷಯ್ ಆರ್ಯನ್ ರಾಥೋಡ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News