ಫಾರೂಕ್ ಅಬುಲ್ಲಾರನ್ನು ಭೇಟಿಯಾದ ಆಝಾದ್

Update: 2020-03-14 15:17 GMT

 ಶ್ರೀನಗರ,ಮಾ.14: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯಸಭೆಯಲ್ಲಿ ಪ್ರತಿಪಕ್ಷ ನಾಯಕ ಗುಲಾಂ ನಬಿ ಆಝಾದ್ ಅವರು ಏಳು ತಿಂಗಳ ದಿಗ್ಬಂಧನದ ಬಳಿಕ ಶುಕ್ರವಾರ ಬಿಡುಗಡೆಗೊಂಡಿರುವ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರನ್ನು ಶನಿವಾರ ನಗರದ ಗುಪ್ಕಾರ್ ಪ್ರದೇಶದಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ಎರಡು ಗಂಟೆಗಳ ಕಾಲ ಮಾತುಕತೆ ನಡೆಸಿದರು.

ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಆಝಾದ್,ಯಾವುದೇ ರಾಜಕೀಯ ಪ್ರಕ್ರಿಯೆ ಆರಂಭಗೊಳ್ಳಲು ಜಮ್ಮು-ಕಾಶ್ಮೀರದಲ್ಲಿ ಮೊದಲು ಪ್ರಜಾಪ್ರಭುತ್ವದ ಮರುಸ್ಥಾಪನೆಯಾಗಬೇಕಿದೆ ಎಂದರು.

ಸಾರ್ವಜನಿಕ ಭದ್ರತಾ ಕಾಯ್ದೆಯಡಿ ಬಂಧನದಲ್ಲಿರುವ ಮಾಜಿ ಮುಖ್ಯಮಂತ್ರಿಗಳಾದ ಉಮರ್ ಅಬ್ದುಲ್ಲಾ ಮತ್ತು ಮೆಹಬೂಬ ಮುಫ್ತಿ ಸೇರಿದಂತೆ ಎಲ್ಲ ನಾಯಕರು ಮತ್ತು ವ್ಯಕ್ತಿಗಳ ಬಿಡುಗಡೆಗೆ ಕರೆ ನೀಡಿದ ಅವರು,ಇದರಿಂದ ಪ್ರಜಾಪ್ರಭುತ್ವವನ್ನು ಮರುಸ್ಥಾಪಿಸ ಬಹುದು ಮತ್ತು ಆಗ ನಾವು ಇತರ ಹೋರಾಟಗಳನ್ನು ಕೈಗೆತ್ತಿಕೊಳ್ಳಬಹುದು ಎಂದರು.

ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನವನ್ನು ಮರಳಿಸುವಂತೆಯೂ ಅವರು ಆಗ್ರಹಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News