ಕೊರೋನಾ ಹಿನ್ನಲೆ: ಬಂಡೀಪುರ ರಾಷ್ಟ್ರೀಯ ಉದ್ಯಾನವನ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ
Update: 2020-03-14 21:06 IST
ಚಾಮರಾಜನಗರ: ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ಹಾಗೂ ಬಂಡೀಪುರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೋಟೆಲ್ ಹಾಗೂ ರೆಸಾರ್ಟ್‍ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಇಂದು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರ ಮತ್ತು ಪ್ರವಾಸಿಗರ ಆರೋಗ್ಯದ ಹಿತದೃಷ್ಟಿಯಿಂದ ಕೊರೋನಾ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮವಾಗಿ ಮಾರ್ಚ್ 15ರಿಂದ 22ರ ವರೆಗೆ ಬಂಡೀಪುರ ರಾಷ್ಟ್ರೀಯ ಉದ್ಯಾನವನಕ್ಕೆ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಅಲ್ಲದೆ ಬಂಡೀಪುರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಹೋಟೆಲ್, ರೆಸಾರ್ಟ್‍ಗಳನ್ನು ಮುಚ್ಚುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶದಲ್ಲಿ ತಿಳಿಸಿದ್ದಾರೆ.