ಕೊರೊನ ವೈರಸ್: ಕೇರಳ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದ ಅಮೆರಿಕನ್ ದಂಪತಿ ಪತ್ತೆ

Update: 2020-03-14 16:10 GMT

ತಿರುವನಂತಪುರಂ, ಮಾ.14: ಕೊರೊನ ವೈರಸ್ ಸೋಂಕಿನ ಲಕ್ಷಣ ಕಾಣಿಸಿಕೊಂಡಿದ್ದ ಹಿನ್ನೆಲೆಯಲ್ಲಿ ಕೇರಳದ ಆಸ್ಪತ್ರೆಗೆ ದಾಖಲಾಗಿದ್ದು ಅಲ್ಲಿಂದ ಶುಕ್ರವಾರ ನಾಪತ್ತೆಯಾಗಿದ್ದ ಅಮೆರಿಕದ ದಂಪತಿಯನ್ನು ಪತ್ತೆಹಚ್ಚಲಾಗಿದ್ದು ಈಗ ಪ್ರತ್ಯೇಕ ವಾರ್ಡ್‌ನಲ್ಲಿ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ದೋಹಾಕ್ಕೆ ತೆರಳಲು ಕೊಚ್ಚಿ ಅಂತರ್ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಈ ದಂಪತಿಯನ್ನು ಪತ್ತೆಹಚ್ಚಿ, ಎರ್ನಾಕುಳಂನ ಜಿಲ್ಲಾಸ್ಪತ್ರೆಗೆ ಕರೆತರಲಾಗಿದೆ. ಬಳಿಕ ಕಲಮಶ್ಯೇರಿ ಮೆಡಿಕಲ್ ಕಾಲೇಜು ಆಸ್ಪತ್ರೆಯ ಪ್ರತ್ಯೇಕ ವಾರ್ಡ್‌ನಲ್ಲಿ ಇರಿಸಲಾಗಿದೆ ಎಂದು ವರದಿಯಾಗಿದೆ. ಅ

ಮೆರಿಕದಿಂದ ಬಂದಿದ್ದ ಈ ದಂಪತಿ ಭೇದಿ ಮತ್ತು ಜ್ವರದ ಹಿನ್ನೆಲೆಯಲ್ಲಿ ಮಾರ್ಚ್ 12ರಂದು ಅಳಪ್ಪುಝದ ಖಾಸಗಿ ಆಸ್ಪತ್ರೆಗೆ ಆಗಮಿಸಿದ್ದರು. ರೋಗಲಕ್ಷಣದ ಬಗ್ಗೆ ಅನುಮಾನಗೊಂಡ ಆಸ್ಪತ್ರೆಯವರು ಸೂಕ್ಷ್ಮಾಣುರೋಗ ಆಸ್ಪತ್ರೆಗೆ ದಾಖಲಾಗುವಂತೆ ಸೂಚಿಸಿದ್ದರು. ಆಗ ಫೋನ್ ಕರೆ ಮಾಡುತ್ತೇವೆ ಎಂದು ಆಸ್ಪತ್ರೆಯಿಂದ ಹೊರಗೆ ಬಂದಿದ ದಂಪತಿ ನಾಪತ್ತೆಯಾಗಿದ್ದರು. ಈ ದಂಪತಿ ಕೊಚ್ಚಿ ಅಂತರಾಷ್ಟ್ರೀಯ ವಿಮಾನಕ್ಕೆ ಕ್ಯಾಬ್ ಮೂಲಕ ಪ್ರಯಾಣಿಸಿದ್ದ ಹಿನ್ನೆಲೆಯಲ್ಲಿ ಕ್ಯಾಬ್ ಚಾಲಕನನ್ನೂ ತಪಾಸಣೆಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News