ಗಾಂಜಾ ಸೇವನೆ: ಮೂವರು ವಶಕ್ಕೆ
Update: 2020-03-14 21:49 IST
ಮಣಿಪಾಲ, ಮಾ.14: ಮಣಿಪಾಲದ ರೀಗಲ್ ಹಿಲ್ಸ್ ಬಳಿ ಮಾ.8ರಂದು ಗಾಂಜಾ ಸೇವನೆ ಮಾಡುತ್ತಿದ್ದ ಮೂವರನ್ನು ಮಣಿಪಾಲ ಪೊಲೀಸರು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈಶ್ವರ ನಗರದ ರಾಘವ್ ಶರ್ಮಾ(22), ಸಾಯಿ ಕಲ್ಯಾಣ್(21), ಪಿಯುಷ್ ನಿಂಬಾಳ್ಕರ್(21) ಎಂಬವರನ್ನು ವಶಕ್ಕೆ ಪಡೆದು ಮಣಪಾಲ ಕೆಎಂಸಿ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ಮುಂದೆ ಹಾಜರು ಪಡಿಸಿದ್ದು ಪರೀಕ್ಷಿಸಿದ ವೈದ್ಯರು ಇವರೆಲ್ಲ ಗಾಂಜಾ ಸೇವಿಸಿರುವ ಬಗ್ಗೆ ದೃಢಪತ್ರ ನೀಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.