ಕೊರೋನ ಬಂದ್: ಜನಜೀವನ ಅಸ್ತವ್ಯಸ್ತ

Update: 2020-03-14 18:34 GMT

ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೋನ ವೈರಸ್ ಸೋಂಕಿನ ಭೀತಿಯಿಂದಾಗಿ ಎಚ್ಚೆತ್ತುಕೊಂಡಿರುವ ರಾಜ್ಯ ಸರಕಾರ ಒಂದು ವಾರ ಕಾಲ ಭಾಗಶಃ ಬಂದ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಮೊದಲ ದಿನವೇ ರಾಜ್ಯ ಸಂಪೂರ್ಣ ಸ್ತಬ್ಧಗೊಂಡಿದೆ. ಸದಾ ಜನಜಂಗುಳಿಯಿಂದ ತುಂಬಿ ತುಳುಕುತ್ತಿದ್ದ ರಾಜಧಾನಿ ಬೆಂಗಳೂರಿನಲ್ಲಿ ಸಾರ್ವಜನಿಕ ಸಾರಿಗೆ, ಮೆಟ್ರೋ, ರೈಲು ಸಂಚಾರ ಎಂದಿನಂತೆ ಚಾಲ್ತಿಯಲ್ಲಿದ್ದರೂ ಕೊರೋನ ಭೀತಿಯಿಂದಾಗಿ ಜನರು ಮನೆಯಿಂದ ಹೊರಬರಲು ಹಿಂಜರಿಯುತ್ತಿದ್ದಾರೆ. ಇಡೀ ನಗರದ ರಸ್ತೆಗಳು ಖಾಲಿ ಖಾಲಿಯಾಗಿ ಬಿಕೋ ಎನ್ನುತ್ತಿದ್ದವು. ಮಂಗಳೂರು ಹಾಗೂ ಉಡುಪಿ ಯಲ್ಲೂ ಪ್ರತಿಕೂಲ ಪರಿಣಾಮ ಬೀರಿದೆ. ಸರಕಾರದ ಆದೇಶ ಪಾಲಿಸಿದ ಮಾಲ್‌ಗಳು, ಚಿತ್ರಮಂದಿರಗಳು ಬಿಕೋ ಎನ್ನುತ್ತಿದ್ದವು. ಆದರೆ, ಮಂಗಳೂರಿನ ಕೇಂದ್ರ ಮಾರುಕಟ್ಟೆ, ಸ್ಟೇಟ್‌ಬ್ಯಾಂಕ್‌ನ ಬೀದಿಬದಿಯ ವ್ಯಾಪಾರ ಭರಾಟೆಯಿಂದ ಸಾಗುತ್ತಿರುವುದು ಕಂಡುಬಂದಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor