×
Ad

ಅನಂತ್ ನಾಗ್ ನಲ್ಲಿ ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಸೇನೆ

Update: 2020-03-15 14:09 IST

ಶ್ರೀನಗರ, ಮಾ. 15: ಜಮ್ಮು ಮತ್ತು ಕಾಶ್ಮೀರದ ಅನಂತ್‌ನಾಗ್ ಜಿಲ್ಲೆಯ ಡಯಲ್‌ಗಾಂ ಪ್ರದೇಶದಲ್ಲಿ  ಸಂಭವಿಸಿದ  ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆ ನಾಲ್ವರು ಉಗ್ರರನ್ನು ಹೊಡೆದುರುಳಿಸಿದೆ.

ರವಿವಾರ  ಬೆಳಿಗ್ಗೆ ಭದ್ರತಾ ಪಡೆಗಳು ಈ ಪ್ರದೇಶವನ್ನು ಸುತ್ತುವರೆದಿವೆ . ಅಲ್ಲಿ ಉಗ್ರರು ಇರುವ ಬಗ್ಗೆ ನಿರ್ದಿಷ್ಟ ಮಾಹಿತಿ ಪಡೆದ ನಂತರ ಶೋಧ ಕಾರ್ಯಾಚರಣೆ ನಡೆಸಿದರು.  ಈ ವೇಳೆ ಉಗ್ರರು  ಮತ್ತು ಭದ್ರತಾ ಪಡೆಗಳ ನಡುವಿನ ಗುಂಡಿನ ಚಕಮಕಿ ನಡೆಯಿತು. ಇದರ ಪರಿಣಾಮವಾಗಿ ನಾಲ್ವರು ಉಗ್ರರು ಸ್ಥಳದಲ್ಲೇ ಮೃತಪಟ್ಟರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News