ಕುಂದಾಪುರ: ವಿವಾಹಿತ ಜೋಡಿಯಿಂದ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ
Update: 2020-03-15 16:44 IST
ಕುಂದಾಪುರ, ಮಾ.15: ಬೆಂಗಳೂರು ಮೂಲದ ವಿವಾಹಿತ ಜೋಡಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರವಿವಾರ ಬೆಳಗ್ಗೆ ಕೋಡಿ ಬೀಚ್‌ನಲ್ಲಿ ನಡೆದಿದೆ.
ವಿಷ ಸೇವಿಸಿ ಅಸ್ವಸ್ಥಗೊಂಡಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹನು ಮಂತನಗರದ ರಮೇಶ್(45) ಹಾಗೂ ಮಹಿಳೆಯನ್ನು ಚಿಕಿತ್ಸೆಗಾಗಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ರಮೇಶ್‌ಗೆ ವಿವಾಹವಾಗಿ ಇಬ್ಬರು ಮಕ್ಕಳಿದ್ದರೆ, ಮಹಿಳೆಗೂ ಮದುವೆಯಾಗಿ ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. ಇವರು ಪರಸ್ಪರ ಪ್ರೀತಿಸುತ್ತಿದ್ದು, ಇಂದು ಬೆಳಗ್ಗೆ ಇನ್ನೋವಾ ಕಾರಿನಲ್ಲಿ ಬೀಚ್‌ಗೆ ಬಂದ ಇವರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತೀವ್ರವಾಗಿ ಅಸ್ವಸ್ಥಗೊಂಡು ನರಳಾಡುತ್ತಿದ್ದ ಇವರನ್ನು ಸ್ಥಳೀಯರು ಕೂಡಲೇ ಆಸ್ಪತ್ರೆಗೆ ದಾಖಲಿಸಿದರು.
ಕುಂದಾಪುರ ಪೊಲೀಸರು ಈ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ.