ಸರ್ಕಾರಿ ಅಭಿವೃದ್ಧಿ ಯೋಜನೆಗಳಲ್ಲಿ ಸಾರ್ವಜನಿಕರ ಸಹಭಾಗಿತ್ವ ಅಗತ್ಯ: ಲಾಲಾಜಿ ಮೆಂಡನ್
ಪಡುಬಿದ್ರಿ: ಸರ್ಕಾರದ ವಿವಿಧ ಅಭಿವೃದ್ಧಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಾರ್ವಜನಿಕರ ಸಹಭಾಗಿತ್ವದ ಅಗತ್ಯವೂ ಇದೆ ಎಂದು ಕಾಪು ಶಾಸಕ ಲಾಲಾಜಿ ಆರ್. ಮೆಂಡನ್ ಹೇಳಿದರು.
ಅವರು ಶನಿವಾರ ಉಚ್ಚಿಲ ಬಡಾಗ್ರಾಮ ಪಂಚಾಯತ್ ಇದರ ಮುಳ್ಳಗುಡ್ಡೆ ಬಳಿ 10 ಲಕ್ಷ ರೂ. ಅನುದಾನದಲ್ಲಿ ರಸ್ತೆಯ ಅಭಿವೃದ್ಧಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದರು.
ಕಾಮಗಾರಿಗಳ ಗುಣಮಟ್ಟವನ್ನು ಪರಿಶೀಲಿಸಿ ನಿತ್ಯ ಉಪಯೋಗಿಸುವ ಇಂತಹ ಗ್ರಾಮೀಣ ಮಟ್ಟದ ಸುಸಜ್ಜಿತ ರಸ್ತೆಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಈ ಮೂಲಕ ಸರ್ಕಾರದ ಯೋಜನೆಯು ಸರ್ವ ಸ್ಪರ್ಶಿಯಾಗ ಬಲ್ಲುದು ಎಂದು ಪ್ರತಿಕ್ರಿಯಿಸಿದರು.
ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಶಿಲ್ಪಾ ಜಿ.ಸುವರ್ಣ, ಉಚ್ಚಿಲ ಬಡಾಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಇಂದಿರಾ ಎಸ್. ಶೆಟ್ಟಿ, ಸದಸ್ಯ ವಸಂತ ದೇವಾಡಿಗ, ಮಾಜಿ ಬಿಜೆಪಿ ಕಾಪು ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕ್ಷೇತ್ರದ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ ರಾವ್, ಅನಿಲ್ ಶೆಟ್ಟಿ ಕೊಡಿಬೆಟ್ಟು, ಉಚ್ಚಿಲ ಗ್ರಾಮ ಸಮಿತಿ ಅಧ್ಯಕ್ಷ ಉದಯ ಕುಮಾರ್, ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ ಹರೀಶ್, ಪ್ರಮುಖರಾದ ಸುಜಿತ್ ಕುಮಾರ್, ಯಶೋಧರ ಶೆಟ್ಟಿ ಮಮತಾ ಶೆಟ್ಟಿ, ಶಶಿಧರ ಶೆಟ್ಟಿ ಎರ್ಮಾಳು, ಸುಧಾಕರ ಶೆಟ್ಟಿ, ಗ್ರಾ.ಪಂ. ಸಿಬ್ಬಂದಿ, ಸ್ಥಳೀಯರು ಉಪಸ್ಥಿತರಿದ್ದರು.