×
Ad

​ ಉಡುಪಿ: 7ರಿಂದ 9ನೆ ತರಗತಿವರೆಗಿನ ಪರೀಕ್ಷೆ ಮುಂದೂಡಿಕೆ

Update: 2020-03-15 20:04 IST

 ಉಡುಪಿ, ಮಾ.15: ಸರಕಾರದ ಸುತ್ತೋಲೆಯಂತೆ ಕೊರೋನಾ ವೈರಸ್ ಸೋಂಕು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ಏಳರಿಂದ ಒಂಭತ್ತನೇ ತರಗತಿಯವರೆಗಿನ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮಾ.31ರವರೆಗೆ ಮುಂದೂ ಡಲಾಗಿದೆ.

ಅಲ್ಲಿಯವರೆಗೆ ವಿದ್ಯಾರ್ಥಿಗಳಿಗೆ ಪರೀಕ್ಷಾ ಪೂರ್ವ ಸಿದ್ದತಾ ರಜೆಯನ್ನು ಘೋಷಿಸಿದ್ದು, ಈ ಅವಧಿಯಲ್ಲಿ ವಿದ್ಯಾರ್ಥಿಗಳು ಶಾಲೆಗೆ ಆಗಮಿಸದಂತೆ ಹಾಗೂ ಈ ತರಗತಿಗಳ ಪರೀಕ್ಷಾ ವೇಳಾಪಟ್ಟಿಯನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.

10ನೇ ತರಗತಿಯ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ಉಡುಪಿ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಶೇಷಶಯನ ಕಾರಿಂಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News