ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್‌ನಿಂದ ಕಲಾವಿದರಿಗೆ ನೆರವು : ಜಯರಾಮ ಶೇಖ
ಮಂಗಳೂರು, ಮಾ.15: ಕೇವಲ ಐದು ವರ್ಷದ ಹಿಂದೆ ಯಕ್ಷಗಾನ ಕಲಾವಿದರಿಗಾಗಿ ಸ್ಥಾಪನೆಯಾದ ಪಟ್ಲ ಫೌಂಡೇಶನ್, 5 ಕೋ.ರೂ. ವೆಚ್ಚದ ಸೇವಾ ಕಾರ್ಯಗಳನ್ನು ಮಾಡುವ ಮೂಲಕ ಸಾಧನೆಯ ಮೈಲಿಗಲ್ಲಾಗಿದೆ ಎಂದು ಉದ್ಯಮಿ ಎಕೆ ಜಯರಾಮ ಶೇಖ ಹೇಳಿದರು.
ಯಕ್ಷಧ್ರುವ ಪಟ್ಲ ಮಂಗಳೂರು ನಗರ ಘಟಕದ ತೃತೀಯ ವಾರ್ಷಿಕ ಸಂಭ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ನಗರ ಘಟಕದ ಅಧ್ಯಕ್ಷರಾದ ಪ್ರದೀಪ್ ಆಳ್ವ ಕದ್ರಿ ಮಾತನಾಡಿ ಮಾ.19ರಂದು ನಗರದ ಪುರಭವನದಲ್ಲಿ ಜರಗುವ ಕಾರ್ಯಕ್ರಮದಲ್ಲಿ ಇಬ್ಬರು ಯಕ್ಷಗಾನ ಕಲಾವಿದರನ್ನು ಅಥವಾ ನೇಪಥ್ಯ ಕಲಾವಿದರನ್ನು ಗುರುತಿಸಿ ಪ್ರೋತ್ಸಾಹಕ ಧನದೊಂದಿಗೆ ಗೌರವಿಸಲಾಗುವುದು ಎಂದರು.
ವೇದಿಕೆಯಲ್ಲಿ ಘಟಕದ ಗೌರವ ಸಂಚಾಲಕ ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೇಂದ್ರೀಯ ಸಮಿತಿಯ ಉಪಾಧ್ಯಕ್ಷ ಡಾ.ಮನು ರಾವ್, ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್, ಕೋಶಾಧಿಕಾರಿ ಸಿಎ ಸುದೇಶ್ ಕುಮಾರ್ ರೈ, ಮಹಿಳಾ ಘಟಕದ ಗೌರವಾಧ್ಯಕ್ಷೆ ಆರತಿ ಆಳ್ವ ಉಪಸ್ಥಿತರಿದ್ದರು.
ಘಟಕದ ಕಾರ್ಯದರ್ಶಿ ಎ ಕೃಷ್ಣ ಶೆಟ್ಟಿ ತಾರೆಮಾರ್ ಸ್ವಾಗತಿಸಿದರು. ಕೋಶಾಧಿಕಾರಿ ರವಿ ಶೆಟ್ಟಿ ಅಶೋಕನಗರ ವಂದಿಸಿದರು.