ಯಕ್ಷಧ್ರುವ ಪಟ್ಲದಿಂದ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ
ಮಂಗಳೂರು, ಮಾ.15: ಯಕ್ಷಧ್ರುವ ಪಟ್ಲ ಸಂಭ್ರಮ-2020ನೇ ಸಾಲಿನ ವಿದ್ಯಾರ್ಥಿ ವೇತನಕ್ಕೆ ಯಕ್ಷಗಾನ ಕಲಾವಿದರ (ವೃತ್ತಿಪರ/ಹವ್ಯಾಸಿ/ಮಹಿಳಾ) ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕನಿಷ್ಠ ಶೇ. 50 ಅಂಕಗಳಿಸಿರಬೇಕು. ಅಂಕ ಪಟ್ಟಿ ಹಾಗೂ ಬ್ಯಾಂಕ್‌ನ ಉಳಿತಾಯ ಖಾತೆಯ ನಕಲು ಪ್ರತಿಗಳನ್ನು ಲಗತ್ತಿಸ ಬೇಕು. ಎಸೆಸೆಲ್ಸಿ ಹಾಗೂ ಪಿಯುಸಿಯಲ್ಲಿ ಶೇ.90ಕ್ಕೂ ಮೇಲ್ಪಟ್ಟು ಅಂಕ ಗಳಿಸಿದ ತಲಾ ಒಬ್ಬ ವಿದ್ಯಾರ್ಥಿಗೆ ಬಂಗಾರದ ಪದಕದೊಂದಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು.
ಅಲ್ಲದ ಪ್ರಾಥಮಿಕ, ಪ್ರೌಢ, ಪಿಯುಸಿ/ಡಿಪ್ಲೊಮಾ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೀಗೆ ಒಟ್ಟು 5 ವಿಭಾಗಗಳಲ್ಲಿ ಪ್ರತ್ಯೇಕವಾಗಿ ಅತಿ ಹೆಚ್ಚು ಅಂಕ ಗಳಿಸಿದ ತಲಾ ಒಬ್ಬ ವಿದ್ಯಾರ್ಥಿಗೆ ವಿದ್ಯಾರ್ಥಿ ಪುರಸ್ಕಾರವನ್ನು ನೀಡಲಾಗುವುದು. ವೃತ್ತಿಪರ ಕಲಾವಿದರ ಎಲ್ಲಾ ಮಕ್ಕಳಿಗೂ (ಶೇ.50ಕ್ಕಿಂತ ಮೇಲ್ಪಟ್ಟು ಅಂಕಗಳನ್ನು ಗಳಿಸಿದ್ದರೆ) ವಿದ್ಯಾರ್ಥಿ ಪ್ರೋತ್ಸಾಹ ಧನವನ್ನು ನೀಡಲಾಗುತ್ತದೆ.
ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ (ರಿ)ಮಂಗಳೂರು, ಕೇಂದ್ರ ಕಚೇರಿ, ಎಂಪೈರ್ ಮಾಲ್‌ನಿಂದ ಅರ್ಜಿಯನ್ನು ಪಡೆದು ಮೇ 10ರೊಳಗೆ ಸಲ್ಲಿಸಬಹುದು ಎಂದು ಡಾ.ಮನು ರಾವ್, ಉಪಾಧ್ಯಕ್ಷರು (9844087664) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.