ಮಾ.31ರವರೆಗೆ ದೇಶಾದ್ಯಂತ ಶಾಲೆಗಳು, ವಿವಿಗಳು ಬಂದ್: ಕೇಂದ್ರ ಆರೋಗ್ಯ ಸಚಿವಾಲಯದ ಸೂಚನೆಗಳಿವು...
Update: 2020-03-16 20:45 IST
ಹೊಸದಿಲ್ಲಿ: ಶಾಲೆಗಳು, ವಿಶ್ವವಿದ್ಯಾಲಯಗಳು ಸೇರಿ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮಾರ್ಚ್ 31ರವರೆಗೆ ಮುಚ್ಚಬೇಕು ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಘೋಷಿಸಿದೆ.
ದೇಶದಲ್ಲಿ ಕೊರೊನಾವೈರಸ್ ಪೀಡಿತರ ಸಂಖ್ಯೆ 120ಕ್ಕೇರಿದೆ. ದೇಶಾದ್ಯಂತ ಮಾರ್ಚ್ 31ರವರೆಗೆ ಶಾಲೆಗಳು, ಕಾಲೇಜುಗಳು, ಜಿಮ್ ಗಳು, ಸ್ಮಿಮ್ಮಿಂಗ್ ಪೂಲ್ ಗಳು, ಮ್ಯೂಸಿಯಂಗಳು, ಸಾಂಸ್ಕೃತಿಕ ಮತ್ತು ಸಾಮಾಜಿಕ ಕೇಂದ್ರಗಳು, ಥಿಯೇಟರ್ ಗಳು ಬಂದ್ ಆಗಲಿವೆ ಎಂದು ತಿಳಿಸಲಾಗಿದೆ.
ವಿದ್ಯಾರ್ಥಿಗಳಿಗೆ ಮನೆಗಳಲ್ಲೇ ಇರಲು ಸೂಚಿಸಲಾಗಿದೆ. ಅನಗತ್ಯ ಪ್ರಯಾಣವನ್ನು ಕಡಿಮೆ ಮಾಡುವಂತೆ ಸಲಹೆ ನೀಡಲಾಗಿದ್ದು, ಎಲ್ಲಾ ವಾಣಿಜ್ಯ ಚಟುವಟಿಕೆಗಳು ಗ್ರಾಹಕರ ನಡುವೆ 1 ಮೀಟರ್ ಅಂತರವನ್ನು ಕಾಯ್ದುಕೊಳ್ಳಬೇಕು ಎಂದು ತಿಳಿಸಲಾಗಿದೆ.