×
Ad

ಹಿರಿಯಡಕ: ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ವಿತರಣೆ

Update: 2020-03-16 21:50 IST

ಉಡುಪಿ, ಮಾ.16: ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ಯೋಜನೆಯಡಿ ಕರ್ನಾಟಕ ಸರಕಾರದ ಕಾಲೇಜು ಶಿಕ್ಷಣ ಇಲಾಖೆ ವತಿಯಿಂದ ಕೊಡಮಾಡಿದ ಲ್ಯಾಪ್‌ಟಾಪ್‌ಗಳನ್ನು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೆೀಜಿನ ವಿದ್ಯಾರ್ಥಿಗಳಿಗೆ ವಿತರಿಸಲಾಯಿತು.

ಕಾಪು ಶಾಸಕ ಹಾಗೂ ಅಭಿವೃಧ್ಧಿ ಸಮಿತಿಯ ಅಧ್ಯಕ್ಷ ಲಾಲಾಜಿ ಆರ್ ಮೆಂಡನ್ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ಹಸ್ತಾಂತ ರಿಸಿ, ಲ್ಯಾಪ್ ಟಾಪ್‌ಗಳನ್ನು ಸರಿಯಾದ ರೀತಿಯಲ್ಲಿ ಬಳಸಿ ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡುವಂತೆ ಪ್ರೋತ್ಸಾಹದ ಮಾತುಗಳನ್ನಾಡಿದರು.

ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್ ಬಳಕೆಯ ಬಗ್ಗೆ ಕಾಲೇಜು ಶಿಕ್ಷಣ ಇಲಾಖೆಯ ಸೂಚನೆ ಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಮಂಗಳೂರು ಕಾಲೇಜು ಶಿಕ್ಷಣ ಇಲಾಖೆಯ ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕ ಡಾ. ಅಪ್ಪಾಜಿ ಗೌಡ, ಉಡುಪಿ ತಾಪಂ ಸದಸ್ಯೆ ಸಂಧ್ಯಾ ಕಾಮತ್, ಬೊಮ್ಮರಬೆಟ್ಟು ಗ್ರಾಪಂ ಉಪಾಧ್ಯಕ್ಷ ಹರೀಶ್ ಸಾಲ್ಯಾನ್, ಕಾಲೇಜು ಅಭಿವೃಧ್ಧಿ ಸಮಿತಿಯ ಸದಸ್ಯರಾದ ಹಿರಿಯ ಆರ್ಥಿಕ ತಜ್ಞ ಡಾ. ಎನ್.ಎಸ್. ಶೆಟ್ಟಿ, ವಸಂತ ಶೆಟ್ಟಿ ಚೆನ್ನಿಬೆಟ್ಟು, ಮುರುಳೀಧರ ಹಾಲಂಬಿ, ಸತ್ಯಾನಂದ ನಾಯಕ್, ಮಾಧವ ನಾಯ್ಕ ಮತ್ತು ರಕ್ಷಕ -ಶಿಕ್ಷಕ ಸಂಘದ ಅಧ್ಯಕ್ಷ ಕುದಿ ವಸಂತ ಶೆಟ್ಟಿ ಉಪಸ್ಥಿತರಿದ್ದರು.

ಕಾಲೇಜಿನಲ್ಲಿ ನಡೆದ ಲ್ಯಾಪ್‌ಟಾಪ್ ವಿತರಣಾ ಸಮಾರಂಭದಲ್ಲಿ ಪ್ರಥಮ ಪದವಿಯ 97 ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ಗಳನ್ನು ಪಡೆದರು. ಲ್ಯಾಪ್ ಟಾಪ್ ಸಮಿತಿಯ ಸದಸ್ಯರಾದ ಸವಿತಾ, ಅನಿಲ್ ಕುಮಾರ್ ಕೆ. ಎಸ್.ಪ್ರವೀಣ ಶೆಟ್ಟಿ, ಪ್ರಾಧ್ಯಾಪಕ ದಿನೇಶ್ ಎಂ, ಉಪನ್ಯಾಸಕ ರವಿಚಂದ್ರ ಬಾಯರಿ ಭಾಗವಹಿಸಿದ್ದರು.

ಲ್ಯಾಪ್ ಟಾಪ್ ಸಮಿತಿಯ ಸದಸ್ಯೆ ಸುಜಯಾ ಕೆ.ಎಸ್. ಸ್ವಾಗತಿಸಿ, ವಂದಿಸಿದರು. ಸುವುನ ಬಿ. ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News