ಅಗತ್ಯ ವಸ್ತುಗಳನ್ನು ಸಂಗ್ರಹಿಸಿಟ್ಟುಕೊಳ್ಳಬೇಡಿ ಟ್ರಂಪ್ ಸಲಹೆ

Update: 2020-03-16 17:02 GMT

ವಾಶಿಂಗ್ಟನ್, ಮಾ. 16: ಕೊರೋನವೈರಸ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ಜನರು ಭಾರೀ ಪ್ರಮಾಣದಲ್ಲಿ ಅಗತ್ಯ ವಸ್ತುಗಳನ್ನು ಖರೀದಿಸುತ್ತಿರುವ ಹಿನ್ನೆಲೆಯಲ್ಲಿ, ಅಗತ್ಯ ವಸ್ತುಗಳನ್ನು ಸಂಗ್ರಹಿಸದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರವಿವಾರ ತನ್ನ ದೇಶವಾಸಿಗಳಿಗೆ ಸಲಹೆ ಮಾಡಿದ್ದಾರೆ.

ಅಮೆರಿಕದ ಪೂರೈಕೆ ವ್ಯವಸ್ಥೆಯು ಜಗತ್ತಿನಲ್ಲೇ ಬಲಿಷ್ಠವಾಗಿದ್ದು, ಅಗತ್ಯ ವಸ್ತುಗಳ ಕೊರತೆ ಯಾವತ್ತೂ ತಲೆದೋರುವುದಿಲ್ಲ ಎಂದು ಟ್ರಂಪ್ ಜನರಿಗೆ ಭರವಸೆ ನೀಡಿದ್ದಾರೆ.

ಈ ಪರಿಸ್ಥಿತಿಯ ಹಿನ್ನೆಲೆಯಲ್ಲಿ, ಟ್ರಂಪ್ ರವಿವಾರ ದಿನಸಿ ಸಾಮಗ್ರಿಗಳ ಅಂಗಡಿಗಳ ಮಾಲೀಕರೊಂದಿಗೆ ಮಾತುಕತೆ ನಡೆಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News