ಕೇಂದ್ರದ ಎಲ್ಲ ಹಣ ಸದ್ಬಳಕೆ: ಮುಖ್ಯಮಂತ್ರಿ ಯಡಿಯೂರಪ್ಪ
Update: 2020-03-17 18:11 IST
ಬೆಂಗಳೂರು, ಮಾ. 17: ‘ಕೇಂದ್ರದಿಂದ ರಾಜ್ಯದ ವಿವಿಧ ಇಲಾಖೆಗಳಿಗೆ ಬಿಡುಗಡೆ ಮಾಡಿರುವ ಅನುದಾನದ ಪೈಕಿ ಬಹುತೇಕ ಹಣ ಖರ್ಚು ಮಾಡಲಾಗಿದ್ದು, ಈ ವರ್ಷವೂ ಎಲ್ಲ ಅನುದಾನ ಬಳಕೆ ಮಾಡಿಕೊಳ್ಳಲಾಗುವುದು’ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ಸದಸ್ಯ ಶಿವಲಿಂಗೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರದಿಂದ 3 ವರ್ಷಗಳಲ್ಲಿ ರಾಜ್ಯಕ್ಕೆ ಬಿಡುಗಡೆಯಾದ ಹಣದಲ್ಲಿ ಬಹುತೇಕ ಬಳಕೆಯಾಗಿದ್ದು, 2019-2020ನೆ ಸಾಲಿನಲ್ಲಿ ಜನವರಿ ಅಂತ್ಯದವರೆಗೆ ಶೇ.84.85ರಷ್ಟು ಹಣ ಬಳಸಲಾಗಿದೆ. ಹಣ ಬಳಕೆಯ ಬಗ್ಗೆ ಕೇಂದ್ರಕ್ಕೆ ಪ್ರಮಾಣ ಪತ್ರ ಸಲ್ಲಿಸಲಾಗಿದೆ. ಈ ವರ್ಷದ ಮಾರ್ಚ್ ಅಂತ್ಯದ ವೇಳೆಗೆ ಅನುದಾನ ಸಂಪೂರ್ಣ ಬಳಕೆ ಮಾಡಿಕೊಳ್ಳಲಾಗುವುದು ಎಂದರು.