ರೈತರಿಗೆ 7 ಗಂಟೆ 3 ಫೇಸ್ ವಿದ್ಯುತ್ ಪೂರೈಕೆಗೆ ಕ್ರಮ: ಯಡಿಯೂರಪ್ಪ
Update: 2020-03-17 19:28 IST
ಬೆಂಗಳೂರು, ಮಾ. 17: ರೈತರ ಕೃಷಿ ಪಂಪ್‌ಸೆಟ್‌ಗಳಿಗೆ 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ನೀಡಲು ಇರುವ ತಾಂತ್ರಿಕ ಅಡಚಣೆಗಳನ್ನು ಸರಿಪಡಿಸಿ ವಿದ್ಯುತ್ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಮಂಗಳವಾರ ವಿಧಾನಸಭೆ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಸದಸ್ಯ ಶರಣಬಸಪ್ಪಗೌಡ ದರ್ಶನಾಪುರ ಕೇಳಿದ ಪ್ರಶ್ನೆ ಉತ್ತರಿಸಿದ ಅವರು, ರೈತರ ಕೃಷಿ ಪಂಪಸೆಟ್‌ಗೆ ಹಗಲು 4 ಗಂಟೆ, ರಾತ್ರಿ 3 ಗಂಟೆ ಸೇರಿ ಒಟ್ಟು 7 ಗಂಟೆಗಳ ಕಾಲ 3 ಫೇಸ್ ವಿದ್ಯುತ್ ಪೂರೈಸಲಾಗುತ್ತಿದೆ.
ತಾಂತ್ರಿಕ ಸಮಸ್ಯೆ ಇರುವ ಪ್ರದೇಶಗಳಲ್ಲಿ ಹಗಲಿನಲ್ಲಿ ನಿರಂತರ 7ಗಂಟೆಗಳ ಕಾಲ 3 ಫೇಸ್ ವಿದ್ಯುತ್‌ನ್ನು ಪಂಪ್‌ಸೆಟ್‌ಗಳಿಗೆ ಸರಬರಾಜು ಮಾಡಲಾಗುತ್ತದೆ. ಕೆಲವು ಕಡೆಗಳಲ್ಲಿ ವಿದ್ಯುತ್ ಉಪ ಕೇಂದ್ರಗಳ ಕಾಮಗಾರಿ ಪ್ರಗತಿಯಲ್ಲಿದ್ದು, ಅವುಗಳನ್ನು ತ್ವರಿತಗತಿ ಪೂರ್ಣಗೊಳಿಸಿ ಸಮಸ್ಯೆ ಪರಿಹರಿಸಲಾಗುವುದು ಎಂದರು.