ಪಾಟೀಲ ಪುಟ್ಟಪ್ಪ ಅಪ್ರತಿಮ ಹೋರಾಟಗಾರ, ಮಹಾನ್ ವ್ಯಕ್ತಿ: ಚಂದ್ರಶೇಖರ ಸ್ವಾಮೀಜಿ

Update: 2020-03-17 14:52 GMT

ಮುಲ್ಕಿ: ಕನ್ನಡದ ಪತ್ರಿಕೋದ್ಯಮ ಮತ್ತು ಸಾಹಿತ್ಯ ಕ್ಷೇತ್ರದಲ್ಲಿ 'ಪಾಪು' ಎಂದೇ ಪ್ರಸಿದ್ಧರಾಗಿದ್ದ ನಾಡೋಜ ಪಾಟೀಲ ಪುಟ್ಟಪ್ಪ ಅವರು ಅಪ್ರತಿಮ ಹೋರಾಟಗಾರ, ಮಹಾನ್ ವ್ಯಕ್ತಿ ಎಂದು ಬೆಂಗಳೂರಿನ ಅಂತರ್ ರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷ್ಯ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.

ಅವರು ತಮ್ಮ ಮುಲ್ಕಿಯ ಆಶ್ರಮದಲ್ಲಿ ಪಾಟೀಲ ಪುಟ್ಟಪ್ಪ ಅವರಿಗೆ ಶ್ರದ್ಧಾಂಜಲಿ ಅರ್ಪಿಸಿ, ಮಾತನಾಡಿ ಸಾಹಿತ್ಯ ಹಾಗೂ ಪತ್ರಿಕೋದ್ಯಮ ಕ್ಷೇತ್ರದಲ್ಲಿ ದಿ. ಪಾಟೀಲ ಪುಟ್ಟಪ್ಪ ಅವರ ಕೊಡುಗೆ ಅಪಾರ. ಕನ್ನಡನಾಡಿನ ನೆಲ-ಜಲಕ್ಕೆ ಸಂಬಂಧಿಸಿದಂತೆ ಅವರ ಹೋರಾಟ ಅವಿಸ್ಮರಣೀಯ ಎಂದು ಬಣ್ಣಿಸಿದರು. ಅವರ ಜೊತೆಗಿನ ತಮ್ಮ ಒಡನಾಟಗಳನ್ನು ಮೆಲಕು ಹಾಕಿದ ಸ್ವಾಮೀಜಿ ಇಡೀ ವಿಶ್ವವೇ ಅಪ್ರತಿಮ ಹೋರಾಟಗಾರನನ್ನು ಕಳೆದುಕೊಂಡಿದೆ ಎಂದು ಸಂತಾಪ ವ್ಯಕ್ತಪಡಿಸಿದ್ದಾರೆ.

ಪಾಟೀಲ ಪುಟ್ಟಪ್ಪ ನಿಧನಕ್ಕೆ ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಕಸಾಪ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಕರ್ನಾಟಕ ಧಾರ್ಮಿಕ ಪರಿಷತ್ ಸದಸ್ಯ ಭುವನಾಭಿರಾಮ ಉಡುಪ ಕಿನ್ನಿಗೋಳಿ, ಮುಲ್ಕಿ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿ ಚಂದ್ರಶೇಖರ ಭಟ್, ಸಂಚಾಲಕರಾದ ಪುನೀತ್ ಕೃಷ್ಣ, ಪುನರೂರು ಪ್ರತಿಷ್ಠಾನದ ಅಧ್ಯಕ್ಷ ದೇವಪ್ರಸಾದ್ ಪುನರೂರು, ಸಾಹಿತಿ ಡಾ. ಹರಿಶ್ಚಂದ್ರ ಸಾಲಿಯಾನ್ ಮುಲ್ಕಿ, ತಾ.ಪಂ. ಸದಸ್ಯ ಶರತ್ ಕುಬೆವೂರು, ಮುಲ್ಕಿ ಬಂಟರ ಸಂಘದ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಸಾಮಾಜಿಕ ಕಾರ್ಯಕರ್ತರಾದ ಗೌತಮ್ ಜೈನ್ ಮುಲ್ಕಿ ಅರಮನೆ, ವಿಶ್ವನಾಥ ರಾವ್ ಪುನರೂರು, ಅಬ್ದುಲ್ ರಝಾಕ್, ಪ್ರಾಣೇಶ ಹೆಜಮಾಡಿ, ಉದಯ ಕುಮಾರ್ ಶೆಟ್ಟಿ ಶಿಮಂತೂರು, ಪ್ರಕಾಶ್ ಆಚಾರ್ಯ ಕಿನ್ನಿಗೋಳಿ, ಕಿಶೋರ್ ಶೆಟ್ಟಿ ಬಪ್ಪನಾಡು, ಗೋಪಿನಾಥ ರಾವ್ ಪುನರೂರು, ಪುರಂದರ ಶೆಟ್ಟಿಗಾರ್, ಕಾಸರಗೋಡು ಕನ್ನಡ ಪರ ಹೋರಾಟಗಾರರಾದ ರಾಮಪ್ರಸಾದ್ ಭಟ್ ಕಾಸರಗೋಡು, ಲಕ್ಷ್ಮೀಶ್ ಭಟ್ ಕಾಸರಗೋಡು, ಮಹೇಶ್ ಭಟ್ ಕಾಸರಗೋಡು ಮತ್ತಿತರರು ಸಂತಾಪ ವ್ಯಕ್ತಪಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News