×
Ad

ಮಾ.19ರಿಂದ ಮಂಗಳೂರು-ಮಡಗಾಂವ್ ರೈಲು ಸಂಚಾರ ರದ್ದು

Update: 2020-03-17 20:51 IST
ಸಾಂದರ್ಭಿಕ ಚಿತ್ರ

ಮಂಗಳೂರು, ಮಾ.17: ಮಂಗಳೂರು ಸೆಂಟ್ರಲ್ ಹಾಗೂ ಮಡಗಾಂವ್ ನಡುವಿನ ರೈಲುಗಳ ಸಂಚಾರವನ್ನು ಮಾ.19ರಿಂದ 31ರವರೆಗೆ ಸಂಪೂರ್ಣವಾಗಿ ರದ್ದುಗೊಳಿಸಲಾಗಿದೆ.

ಮಂಗಳೂರು ಸೆಂಟ್ರಲ್‌ನಿಂದ ಪ್ರಯಾಣ ಬೆಳೆಸಲಿರುವ ಮಂಗಳೂರು ಸೆಂಟ್ರಲ್- ಮಡಗಾಂವ್ ಇಂಟರ್‌ ಸಿಟಿ ಎಕ್ಸ್‌ಪ್ರೆಸ್ (ಟ್ರೇನ್ ನಂ.22636) ರೈಲು ಹಾಗೂ ಮಡಗಾಂವ್‌ನಿಂದ ಮಂಗಳೂರು ಸೆಂಟ್ರಲ್‌ಗೆ ಆಗಮಿಸುವ ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲ್‌ನ್ನು (22635) ಮಾ.31ರವರೆಗೆ ರದ್ದುಗೊಳಿಸಲಾಗಿದೆ ಎಂದು ದಕ್ಷಿಣ ರೈಲ್ವೆಯ ಪಾಲಕ್ಕಾಡ್ ವಿಭಾಗದ ಸಾರ್ವಜನಿಕ ಸಂಪರ್ಕ ಅಧಿಕಾರಿ ಎಂ.ಕೆ. ಗೋಪಿನಾಥ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News