ಮಂಗಳೂರು ಗೋಲಿಬಾರ್ ಪ್ರಕರಣ: ತನಿಖಾ ವರದಿ ಸಲ್ಲಿಸಲು ದ.ಕ. ಡಿಸಿಗೆ ಹೈಕೋರ್ಟ್ ಆದೇಶ

Update: 2020-03-17 15:43 GMT

ಬೆಂಗಳೂರು, ಮಾ.17: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ 2019ರ ಡಿ.19ರಂದು ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ಸಂಭವಿಸಿ ಪೊಲೀಸ್ ಗೋಲಿಬಾರ್ ಘಟನೆ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಹೈಕೋರ್ಟ್ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೈಗೊಂಡಿರುವ ತನಿಖೆ ಬಗ್ಗೆ ಮಾಹಿತಿ ನೀಡಲು ಸೂಚಿಸಿದೆ. 

ಈ ಕುರಿತು ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಮತ್ತು ನ್ಯಾಯಮೂರ್ತಿ ಅಶೋಕ್ ಎಸ್. ಕಿಣಗಿ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು. ಅಡ್ವಕೇಟ್ ಜನರಲ್ ಪ್ರಭುಲಿಂಗ್ ಕೆ. ನಾವದಗಿ ವಾದಿಸಿ, ಮಂಗಳೂರಿನಲ್ಲಿ ನಡೆದ ಪೊಲೀಸ್ ಗೋಲಿಬಾರ್ ಘಟನೆಯನ್ನು ಈಗಾಗಲೇ ಸಿಐಡಿಗೆ ವಹಿಸಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ಪೀಠಕ್ಕೆ ತಿಳಿಸಿದರು.

ವಕೀಲರ ವಾದ ಆಲಿಸಿದ ನ್ಯಾಯಪೀಠವು ಮಂಗಳೂರು ಪೊಲೀಸ್ ಗೋಲಿಬಾರ್ ಬಗ್ಗೆ ಕೈಗೊಂಡಿರುವ ತನಿಖೆ ಕುರಿತು ಮುಂದಿನ ವಿಚಾರಣೆ ವೇಳೆ ವರದಿ ನೀಡುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಸೂಚಿಸಿ, ವಿಚಾರಣೆಯನ್ನು ಮುಂದೂಡಿತು. ಅರ್ಜಿದಾರರ ಪರವಾಗಿ ವಕೀಲ ಬಿ.ಎನ್.ಜಗದೀಶ್ ಅವರು ವಾದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News