×
Ad

ವಿಶ್ವ ಆರೋಗ್ಯ ಸಂಸ್ಥೆಯ ಇಬ್ಬರು ಸಿಬ್ಬಂದಿಗೆ ಕೊರೋನವೈರಸ್ ಸೋಂಕು

Update: 2020-03-17 21:43 IST

ಲಾಸಾನ್ (ಸ್ವಿಟ್ಸರ್‌ಲ್ಯಾಂಡ್), ಮಾ. 17: ಕೊರೋನವೈರಸ್ ವಿರುದ್ಧದ ಜಾಗತಿಕ ಹೋರಾಟದ ನೇತೃತ್ವವನ್ನು ವಹಿಸಿರುವ ವಿಶ್ವ ಆರೋಗ್ಯ ಸಂಸ್ಥೆಯ ಇಬ್ಬರು ಸಿಬ್ಬಂದಿಯಲ್ಲಿ ಕೊರೋನವೈರಸ್ ಸೋಂಕು ಇರುವುದು ಪತ್ತೆಯಾಗಿದೆ ಎಂದು ಸಂಸ್ಥೆಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ.

‘‘ಈ ಸಿಬ್ಬಂದಿ ಈಗ ಕಚೇರಿ ತೊರೆದಿದ್ದಾರೆ ಹಾಗೂ ಮನೆಯಲ್ಲಿ ಅವರು ಕೊರೋನವೈರಸ್ ಲಕ್ಷಣಗಳನ್ನು ತೋರಿಸಿದ್ದಾರೆ. ಅವರನ್ನು ತಪಾಸಣೆಗೆ ಒಳಪಡಿಸಲಾಗಿದ್ದು ಅವರಲ್ಲಿ ಕೋವಿಡ್-19 ಇರುವುದು ದೃಢಪಟ್ಟಿದೆ’’ ಎಂದು ವಿಶ್ವ ಆರೋಗ್ಯ ಸಂಸ್ಥೆಯ ವಕ್ತಾರ ಕ್ರಿಶ್ಚಿಯನ್ ಲಿಂಡ್‌ಮೆಯರ್ ಸುದ್ದಿಗಾರರಿಗೆ ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News