ಜಿಂದಾಲ್‌ಗೆ ಗಣಿಗಾರಿಕೆ ಪರವಾನಗಿ: ಬಿಜೆಪಿಯನ್ನು ತರಾಟೆಗೆ ತೆಗೆದ ಪ್ರತಿಪಕ್ಷದ ಸದಸ್ಯರು

Update: 2020-03-17 17:18 GMT

ಬೆಂಗಳೂರು, ಮಾ.17: ಜಿಂದಲ್ ಕಂಪೆನಿಗೆ ಗಣಿಗಾರಿಕೆ ನಡೆಸಲು ಪರವಾನಗಿ ನೀಡಿರುವುದಕ್ಕೆ ಪ್ರತಿಪಕ್ಷದ ಸದಸ್ಯರು ವಿಧಾನಪರಿಷತ್‌ನಲ್ಲಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡರು.

ಮಂಗಳವಾರ ವಿಧಾನಪರಿಷತ್‌ನಲ್ಲಿ ಚುಕ್ಕೆ ಗುರುತಿನ ಪ್ರಶ್ನೆಯಡಿ ಕಾಂಗ್ರೆಸ್ ಸದಸ್ಯ ಪಿ.ಆರ್.ರಮೇಶ್, ಈ ಹಿಂದೆ ಸಮ್ಮಿಶ್ರ ಸರಕಾರ ಜಿಂದಾಲ್ ಕಂಪೆನಿಗೆ ಗಣಿಗಾರಿಕೆಗೆ ಅವಕಾಶ ನೀಡಿದ್ದಕ್ಕೆ ಬಿಜೆಪಿ ಪ್ರತಿಭಟನೆ ನಡೆಸಿತು. ಈಗ ಅದೇ ಬಿಜೆಪಿ ಅಧಿಕಾರಕ್ಕೆ ಬಂದ ತಕ್ಷಣ ಯಾವ ನಿಯಮದ ಆಧಾರದಲ್ಲಿ ಪರವಾನಿಗೆ ನೀಡಿದೆ ಎಂದು ಪ್ರಶ್ನಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಸಿ.ಸಿ.ಪಾಟೀಲ್, ಸುಪ್ರೀಂ ಕೋರ್ಟ್‌ನ ನಿರ್ದೇಶದನ್ವಯ ಪರವಾನಿಗೆ ನೀಡಲಾಗಿದೆ ಎಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರು, ನಮ್ಮ ಅವಧಿಯಲ್ಲಿಯೂ ಅದೇ ನಿಯಮವನ್ನು ಆಧರಿಸಿಯೇ ಪರವಾನಿಗೆ ನೀಡಲಾಗಿತ್ತು. ಆಗ ಉಗ್ರವಾಗಿ ವಿರೋಧಿಸಿದವರು, ಈಗ ಪರವಾನಿಗೆ ನೀಡಿರುವುದಕ್ಕೆ ಯಾವುದಾದರು ನಿಖರವಾದ ನಿಯಮಗಳಿವೆಯೆ ಎಂದು ಮರು ಪ್ರಶ್ನಿಸಿದರು.

ಬಿಜೆಪಿ ಸದಸ್ಯರು, ಪ್ರಶ್ನೋತ್ತರದ ಸಮಯವನ್ನು ಈ ರೀತಿ ವ್ಯರ್ಥ ಮಾಡಬಾರದೆಂದು ಪ್ರತಿಪಕ್ಷದ ಸದಸ್ಯರನ್ನು ಟೀಕಿಸಲು ಮುಂದಾದರು. ಇದಕ್ಕೆ ಪ್ರತಿಪಕ್ಷದ ಸದಸ್ಯರು ವಾಗ್ವಾದಕ್ಕೆ ಇಳಿದರು. ಈ ವೇಳೆ ಮಧ್ಯೆ ಪ್ರವೇಶಿಸಿದ ಸಚಿವ ಸಿ.ಸಿ.ಪಾಟೀಲ್, ಈ ವಿಷಯಕ್ಕೆ ಸಂಬಂಧಿಸಿದಂತೆ ಬೇಕಿದ್ದರೆ ಅರ್ಧ ಗಂಟೆ ಚರ್ಚೆಗೆ ಅವಕಾಶ ನೀಡಲಿ. ಎಲ್ಲವನ್ನು ಸವಿವರವಾಗಿ ಹೇಳುತ್ತೇನೆಂದು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News