×
Ad

ಅನುದಾನ ಹಂಚಿಕೆ ಸಮಸ್ಯೆ ಸರಿಪಡಿಸುತ್ತೇನೆ: ಮುಖ್ಯಮಂತ್ರಿ

Update: 2020-03-17 23:42 IST

ಬೆಂಗಳೂರು, ಮಾ.17: ನಮ್ಮ ಸರಕಾರ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ಇದ್ದಂತಹ ಆರ್ಥಿಕ ಪರಿಸ್ಥಿತಿಗೆ ಅನುಗುಣವಾಗಿ ಕೆಲವು ಕಾಮಗಾರಿಗಳನ್ನು ತಡೆ ಹಿಡಿಯಲಾಗಿತ್ತು. ಇದೀಗ ಎಲ್ಲವನ್ನು ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟನೆ ನೀಡಿದರು. 

ಮಂಗಳವಾರ ವಿಧಾನಸಭೆಯಲ್ಲಿ ನಗರೋತ್ಥಾನ ಯೋಜನೆಯಡಿ ಕೆಲವು ಕ್ಷೇತ್ರಗಳ ನಗರಸಭೆ, ಪುರಸಭೆಗಳಿಗೆ ಕೋಟ್ಯಂತರ ರೂ. ಬಿಡುಗಡೆಯಾಗಿರುವ ಕುರಿತು ನಿಯಮ 69ರಡಿಯಲ್ಲಿ ಜೆಡಿಎಸ್ ಸದಸ್ಯರು ಪ್ರಸ್ತಾಪಿಸಿದ ವಿಷಯದ ಕುರಿತು ಅವರು ಸ್ಪಷ್ಟೀಕರಣ ನೀಡಿದರು.

ಬಿಜೆಪಿಯ ಶಾಸಕರು ಕೂಡ ಸರಕಾರದ ಈ ನಿರ್ಧಾರದಿಂದ ಅಸಮಾಧಾನಗೊಂಡಿದ್ದು ನಿಜ. ಇದೀಗ, ಅನುದಾನ ನೀಡುವ ವಿಚಾರದಲ್ಲಿ ಆಗುತ್ತಿರುವ ಸಮಸ್ಯೆಗಳನ್ನು ಸರಿಪಡಿಸುತ್ತೇನೆ. ಯಾರೂ ಕೂಡ ಬೇಸರಪಟ್ಟುಕೊಳ್ಳುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News