×
Ad

ಕೊರೋನ ಎಫೆಕ್ಟ್: ಕೆಎಸ್ಸಾರ್ಟಿಸಿಗೆ ಎಷ್ಟು ಕೋಟಿ ರೂ. ನಷ್ಟ ಗೊತ್ತೇ ?

Update: 2020-03-18 18:01 IST

ಬೆಂಗಳೂರು, ಮಾ.18: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕಿನ ಭೀತಿಯ ಹಿನ್ನೆಲೆಯಲ್ಲಿ ದೂರದ ಊರುಗಳಿಗೆ ಸಂಚರಿಸುವ ಪ್ರಯಾಣಿಕರ ಸಂಖ್ಯೆ ಕೂಡ ಕಡಿಮೆ ಆಗಿದ್ದು, ಕೆಎಸ್ಸಾರ್ಟಿಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಭಾರಿ ಇಳಿಕೆ ಆಗಿದೆ. ಹೀಗಾಗಿ ಅನೇಕ ಕಡೆಗಳಿಗೆ ಸಂಚಾರ ರದ್ದು ಮಾಡಿರುವ ನಿಗಮ, ಟಿಕೆಟ್ ಬುಕ್ಕಿಂಗ್‌ನಲ್ಲೂ ಕಡಿಮೆ ಆಗಿರುವದರಿಂದ ಅಂದಾಜು ಸುಮಾರು 6.68 ಕೋಟಿ ರೂ. ನಷ್ಟ ಉಂಟಾಗಿದೆ ಎಂಬುದಾಗಿ ತಿಳಿದು ಬಂದಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಪ್ರಯಾಣಿಕರ ಸಂಖ್ಯೆ ಗಣನೀಯವಾಗಿ ಇಳಿಕೆಯಾದ ಪರಿಣಾಮ, ಕಳೆದ ಒಂದು ವಾರದಿಂದ ಪ್ರಯಾಣಿಕರಿಲ್ಲದೇ ಕೆಎಸ್ಸಾರ್ಟಿಸಿ ಬಸ್‌ಗಳು ಖಾಲಿ ಖಾಲಿ ಸಂಚರಿಸುತ್ತಿವೆ. ಇದರ ಪರಿಣಾಮವಾಗಿ ಅನೇಕ ಕಡೆಯಲ್ಲಿ ನಿಗಮ ಬಸ್ ಸಂಚಾರವನ್ನೇ ರದ್ದು ಪಡಿಸಿದೆ.

ಇನ್ನು ಕೊರೋನ ವೈರಸ್ ಭೀತಿಯಿಂದಾಗಿ ಟಿಕೆಟ್ ಬುಕ್ಕಿಂಗ್ ಇಲ್ಲ, ಬಸ್‌ನಲ್ಲಿ ಓಡಾಡುವವರ ಸಂಖ್ಯೆಯೂ ಗಣನೀಯವಾಗಿ ಇಳಿಕೆ ಆಗಿದೆ. ಇದರಿಂದಾಗಿ ಕೆಎಸ್ಸಾರ್ಟಿಸಿ ಸಂಸ್ಥೆಗೆ ಕಳೆದ ಒಂದು ವಾರದಿಂದ ಸುಮಾರು 6.68 ಕೋಟಿ ರೂ. ನಷ್ಟವಾಗಿರುವುದಾಗಿ ತಿಳಿದು ಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News