ಕೊರೋನ ಹಿನ್ನೆಲೆ: ಕೆಎಂಸಿ ಹೊರರೋಗಿ ವಿಭಾಗದ ಸಮಯದಲ್ಲಿ ಬದಲಾವಣೆ

Update: 2020-03-18 14:31 GMT

ಮಣಿಪಾಲ, ಮಾ.18: ಮಣಿಪಾಲದ ಕಸ್ತೂರ್‌ಬಾ ಆಸ್ಪತ್ರೆಯ ಆಡಳಿತ ಮಂಡಳಿ ಕೊರೋನ ವೈರಸ್ (ಕೋವಿಡ್-19) ಅನ್ನು ತಡೆಗಟ್ಟುವ ಮುನ್ನೆಚ್ಚರಿಕೆ ಕ್ರಮವಾಗಿ ತತ್‌ಕ್ಷಣದಿಂದ ಜಾರಿಗೆ ಬರುವಂತೆ ಎಲ್ಲಾ ಹೊರರೋಗಿ ವಿಭಾಗ ಗಳನ್ನು ಬೆಳಗ್ಗೆ 8:30ರಿಂದ ಅಪರಾಹ್ನ 1 ರ ನಡುವೆ ಮಾತ್ರ ಕಾರ್ಯನಿರ್ವಹಿಸಲು ನಿರ್ಧರಿಸಿದೆ.

ವೈದ್ಯಕೀಯ ತುರ್ತು, ಎಮರ್ಜೆನ್ಸಿ ಸೇವೆಗಳಿಗಾಗಿ ಮಾತ್ರ ಜನರು ಆಸ್ಪತ್ರೆಗೆ ಭೇಟಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಎಲ್ಲಾ ಪೂರ್ವ ನಿಯೋಜಿತ ಭೇಟಿಗಳನ್ನು ಮುಂದೂಡಬೇಕು ಎಂದೂ ತಿಳಿಸಲಾಗಿದೆ.

ಒಳರೋಗಿಗಳೊಂದಿಗೆ ಒಬ್ಬರಿಗೆ ಮಾತ್ರ ಇರಲು ಅವಕಾಶ ಕಲ್ಪಿಸಲಾಗಿದೆ. ತೀವ್ರ ನಿಗಾ ಘಟಕಗಳಿಗೆ (ಐಸಿಯು) ಹಾಗೂ ಶಸ್ತ್ರಚಿಕಿತ್ಸೆ ನಂತರದ ತೀವ್ರ ನಿಗಾ ಘಟಕಗಳಿಗೆ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ತುರ್ತು ಚಿಕಿತ್ಸಾ ಸೇವೆಗಳ ಎಂದಿನಂತೆ ಕಾರ್ಯ ನಿರ್ವಹಿಸಲಿವೆ. ಹಿರಿಯ ನಾಗರಿಕರು ಹಾಗೂ ಮಕ್ಕಳು ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ಮಾತ್ರ ಆಸ್ಪತ್ರೆಗೆ ಭೇಟಿ ನೀಡುವಂತೆ ವಿನಂತಿಸ ಲಾಗಿದೆ ಎಂದು ಕೆಎಂಸಿಯ ವೈದ್ಯಕೀಯ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News