ಕೇಂದ್ರ ಸಚಿವ ಹರ್ಷವರ್ಧನ ವಿರುದ್ಧ ಬಿಹಾರ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಕೆ

Update: 2020-03-18 14:39 GMT
ಫೈಲ್ ಚಿತ್ರ

 ಮುಝಫ್ಫರ್‌ಪುರ,ಮಾ.18: ಕೊರೋನವೈರಸ್ ಸೋಂಕಿನ ಭೀತಿಯಿಂದಾಗಿ ಯದ್ವಾತದ್ವಾ ಬೇಡಿಕೆಯಲ್ಲಿರುವ ಮಾಸ್ಕ್‌ಗಳು ಮತ್ತು ಹ್ಯಾಂಡ್ ಸ್ಯಾನಿಟೈಜರ್‌ಗಳ ಕಾಳಸಂತೆ ಮಾರಾಟವನ್ನು ತಡೆಯಲು ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ ಅವರು ವಿಫಲರಾಗಿದ್ದಾರೆ ಎಂದು ಆರೋಪಿಸಿ ಸಾಮಾಜಿಕ ಕಾರ್ಯಕರ್ತ ತಮನ್ನಾ ಹಾಶಿಮಿ ಅವರು ಬುಧವಾರ ಇಲ್ಲಿಯ ನ್ಯಾಯಾಲಯದಲ್ಲಿ ಅರ್ಜಿಯನ್ನು ಸಲ್ಲಿಸಿದ್ದು, ಮಾ.30ರಂದು ಅರ್ಜಿಯ ವಿಚಾರಣೆ ನಡೆಯಲಿದೆ.

ಮುಖಕ್ಕೆ ಧರಿಸುವ ಮಾಸ್ಕ್‌ಗಳು ಮತ್ತು ಸ್ಯಾನಿಟೈಸರ್‌ಗಳ ತೀವ್ರ ಕೊರತೆಯಿದೆ ಮತ್ತು ದಾಸ್ತಾನು ಇದ್ದವರು ಅವುಗಳನ್ನು 10 ಪಟ್ಟು ದರಗಳಲ್ಲಿ ಮಾರಾಟ ಮಾಡುತ್ತಿದ್ದಾರೆ ಎಂಬ ಸುದ್ದಿವಾಹಿನಿಗಳ ವರದಿಗಳನ್ನು ತನ್ನ ಅರ್ಜಿಯಲ್ಲಿ ಉಲ್ಲೇಖಿಸಿರುವ ಹಾಶಿಮಿ,ಈ ವಸ್ತುಗಳ ಕಾಳಸಂತೆ ಮಾರಾಟವನ್ನು ತಡೆಯಲು ಹರ್ಷವರ್ಧನ ವಿಫಲರಾಗಿರುವುದು ಸ್ಪಷ್ಟವಾಗಿದೆ ಮತ್ತು ಈ ಅಕ್ರಮ ದಂಧೆಗೆ ಅವರು ಕುಮ್ಮಕ್ಕು ನೀಡುತ್ತಿರುವಂತಿದೆ ಎಂದು ಆರೋಪಿಸಿದ್ದಾರೆ.

ಐಪಿಸಿಯ ವಿವಿಧ ಕಲಮ್‌ಗಳಡಿ ಹರ್ಷವರ್ಧನ ವಿರುದ್ಧ ಎಫ್‌ಐಆರ್ ದಾಖಲಿಸಲು ಪೊಲೀಸರಿಗೆ ನಿರ್ದೇಶ ನೀಡುವಂತೆಯೂ ಅವರು ಅರ್ಜಿಯಲ್ಲಿ ಕೋರಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News